ಬಜೆಟ್ ಸ್ನೇಹಿ ಕಾರುಗಳನ್ನು ಹುಡುಕುತ್ತಿದ್ದೀರಾ? ಕಡಿಮೆ ಬೆಲೆ, ಬೆಸ್ಟ್ ಮೈಲೇಜ್ ನೀಡುವ 3 ಕಾರುಗಳಿವು!

ಮಾರುತಿ ಸುಜುಕಿ ಇಗ್ನಿಸ್‌ನಿಂದ ಹಿಡಿದು ನಿಸ್ಸಾನ್ ಮ್ಯಾಗ್ನೈಟ್ ವರೆಗೆ ಭಾರತದಲ್ಲಿ ಹಲವಾರು ಕಾರುಗಳು 2025 ರಲ್ಲಿ ಕೈಗೆಟುಕುವ ಹಾಗೂ ಚಾಲನೆಗೆ ಸೂಕ್ತವಾದ ಕಾರುಗಳಾಗಿದ್ದು, ಅವನ್ನು ಇಲ್ಲಿ ಪಟ್ಟಿ ಮಾಡಿದ್ದೇವೆ. ಆಕರ್ಷಕ ಫೀಚರ್ಸ್, ಸಮಂಜಸವಾದ ಬೆಲೆ ಮತ್ತು ಉತ್ತಮ ಪರ್ಫಾಮೆನ್ಸ್ ನೀಡುತ್ತವೆ. ನಿಮ್ಮ ಮುಂದಿನ ಖರೀದಿಯಲ್ಲಿ ದೈನಂದಿನ ಪ್ರಯಾಣ ಮೀರಿ ಹೆಚ್ಚಿನ ಖುಷಿ ನೀಡುವ ಕಾರುಗಳನ್ನು ನೋಡುತ್ತಿದ್ದರೆ ಇವು ನಿಮ್ಮ ಆದ್ಯತೆಗಳಿಗೆ ತಕ್ಕ ಕಾರುಗಳಾಗಿರಬಹುದು. ಬನ್ನಿ ಹಾಗಾದ್ರೆ ಯಾವೆಲ್ಲಾ ಕಾರುಗಳಿವೆ ಅವುಗಳ ವಿಶೇಷತೆಗಳೇನು ತಿಳಿಯೋಣ.

ಮಾರುತಿ ಸುಜುಕಿ ಇಗ್ನಿಸ್: ಈ ಹ್ಯಾಚ್‌ಬ್ಯಾಕ್‌ ಬಜೆಟ್ ಬೆಲೆಯಲ್ಲಿ ಲಭ್ಯವಿದ್ದು, ಆರಂಭಿಕ ಬೆಲೆ ರೂ.5.85 ಲಕ್ಷ ಹಾಗೂ ಟಾಪ್ ವೇರಿಯೆಂಟ್ ಬೆಲೆ ರೂ.8.12 ಲಕ್ಷ (ಎಕ್ಸ್-ಶೋರೂಂ) ಇದೆ. ಹೊಸ ಇಗ್ನಿಸ್ 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

top-3-fun-to-drive-budget-friendly-cars-in-india

ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ನೀಡಲಾಗಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಗಳನ್ನು ನೀಡುತ್ತದೆ. 20 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್ ಹೊಂದಿದೆ.

ಟಾಟಾ ಟಿಯಾಗೊ: ಈ ಕಾರಿನ ಮೂಲ ಮಾದರಿಯ ಬೆಲೆ ರೂ. 5.00 ಲಕ್ಷದಿಂದ ಆರಂಭವಾಗಿ ಟಾಪ್ ಮಾದರಿಯ ಬೆಲೆ ರೂ. 8.55 ಲಕ್ಷದವರೆಗೆ (ಎಕ್ಸ್ ಶೋರೂಂ) ಇದೆ. ಎಲೆಕ್ಟ್ರಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಒಆರ್‌ವಿಎಂಗಳು, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಹೊಂದಾಣಿಕೆಯೊಂದಿಗೆ 7 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಹಿಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

top-3-fun-to-drive-budget-friendly-cars-in-india

ಟಾಟಾ ಟಿಯಾಗೊದಲ್ಲಿ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌ಗಳು, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ವಿತ್ ಇಬಿಡಿ ಮತ್ತು ಕಾರ್ನರಿಂಗ್ ಸ್ಟೆಬಿಲಿಟಿ ಕಂಟ್ರೋಲ್ ನೀಡಲಾಗಿದೆ. ಟಾಟಾ ಟಿಯಾಗೊ 1.2-ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಬರುತ್ತದೆ, ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿಯೊಂದಿಗೆ ಖರೀದಿಸಬಹುದು. ಹಾಗೆಯೇ ಸಿಎನ್‌ಜಿ ಆಯ್ಕೆಯಲ್ಲೂ ಲಭ್ಯವಿದೆ.

ನಿಸ್ಸಾನ್ ಮ್ಯಾಗ್ನೈಟ್: ಈ ಕಾರು ರೂ.6.14 ಲಕ್ಷದಿಂದ ರೂ.11.76 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡುತ್ತದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

top-3-fun-to-drive-budget-friendly-cars-in-india

8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ರೂ.8.30 ಲಕ್ಷ (ಎಕ್ಸ್-ಶೋರೂಂ) ಬೆಲೆಗೆ ಮಾರಾಟಕ್ಕೆ ಬಂದಿದೆ. 'ಎನ್-ಕನೆಕ್ಟಾ' ರೂಪಾಂತರವನ್ನು (ವೇರಿಯೆಂಟ್) ಆಧರಿಸಿದೆ. ಬುಕ್ಕಿಂಗ್ ಕೂಡ ಶುರುವಾಗಿದ್ದು, ಆಸಕ್ತ ಗ್ರಾಹಕರು ಸಮೀಪದ ಕಂಪನಿಯ ಡೀಲರ್‌ಶಿಪ್‌ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಈ ಕಾರುಗಳು ನಿಮ್ಮ ಬಜೆಟ್ ಬೆಲೆಯಲ್ಲಿ ಸಿಗುವ ಬೆಸ್ಟ್ ಆಯ್ಕೆಗಳಾಗಿವೆ. ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ನಲ್ಲಿ ತಿಳಿಸಿ.

Article Published On: Tuesday, August 26, 2025, 10:30 [IST]
English summary
Top 3 fun to drive budget friendly cars in india
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+