Mileage Mpvs: 7-ಸೀಟರ್.. ಭರ್ಜರಿ ಮೈಲೇಜ್ ನೀಡಬಲ್ಲ ಎಂಪಿವಿಗಳಿವು.. 2 ಫ್ಯಾಮಿಲಿ ಓಡಾಡಬಹುದು!

Mileage Mpvs: ಹೊಸ ಕಾರು ಖರೀದಿ ಮಾಡಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ವಿಶೇಷವಾಗಿ ತಮ್ಮ ಕುಟುಂಬಕ್ಕಾಗಿ ದೊಡ್ಡ ಗಾತ್ರ ಹಾಗೂ ಹೆಚ್ಚು ವಿಶಾಲವಾದ ಎಂಪಿವಿಯನ್ನು ತೆಗೆದುಕೊಳ್ಳಬೇಕು ಎಂಬ ಬಯಕೆಯಿರುತ್ತದೆ. ಅಂತಹವರಿಗೆ ಟೊಯೊಟಾ ಇನ್ನೋವಾ ಹೈಕ್ರಾಸ್, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಹಾಗೂ ಮಾರುತಿ ಸುಜುಕಿ ಇನ್ವಿಕ್ಟೋಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ, ಈ ಎಂಪಿವಿಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಇದೊಂದು ಜನಪ್ರಿಯ ಎಂಪಿವಿಯಾಗಿದ್ದು, ಒಂದು ತುಂಬು ಕುಟುಂಬ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು. ಕನಿಷ್ಠ ರೂ.19.94 ಲಕ್ಷ ಹಾಗೂ ಗರಿಷ್ಠ ರೂ.31.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಪ್ಲಾಟಿನಮ್ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸೂಪರ್ ವೈಟ್ ಹಾಗೂ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Top 3 Mileage Mpvs With 7 seater Toyota Innova Hycross Kia Carens Clavis And Maruti Invicto Details

ಈ ಕಾರು 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಚ್ಚ ಹೊಸ ಇನ್ನೋವಾ ಹೈಕ್ರಾಸ್ ಎಂಪಿವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, 9-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Top 3 Mileage Mpvs With 7 seater Toyota Innova Hycross Kia Carens Clavis And Maruti Invicto Details

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದು ವಿಶ್ವಾಸಾರ್ಹ ಎಂಪಿವಿಯಾಗಿದೆ. ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಸ್ಪಾರ್ಕ್ಲಿಂಗ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 15.34 ರಿಂದ 19.54 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 6/7 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Top 3 Mileage Mpvs With 7 seater Toyota Innova Hycross Kia Carens Clavis And Maruti Invicto Details

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto):

ಇದನ್ನು ಪ್ರಮುಖ ಎಂಪಿವಿ ಎಂದು ಪರಿಗಣಿಸಲಾಗಿದೆ. ಕನಿಷ್ಠ ರೂ.25.51 ಲಕ್ಷ ಮತ್ತು ಗರಿಷ್ಠ ರೂ.29.22 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಮೆಜೆಸ್ಟಿಕ್ ಸಿಲ್ವರ್, ಮಿಸ್ಟಿಕ್ ವೈಟ್, ಸ್ಟೆಲ್ಲರ್ ಬ್ರೋನ್, ನೆಕ್ಸಾ ಬ್ಲೂ ಹಾಗೂ ಮ್ಯಾಗ್ನಿಫಿಸೆಂಟ್ ಬ್ಲ್ಯಾ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 23.24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/8 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Article Published On: Thursday, September 4, 2025, 23:16 [IST]
English summary
Top 3 mileage mpvs with 7 seater toyota innova hycross kia carens clavis and maruti invicto detai
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+