Top 3 Mileage Sedan Cars: ಕುದುರೆ ರೀತಿ ಓಡಬಲ್ಲ ಸೆಡಾನ್‌ಗಳಿವು.. ಬೈಕ್‌ನಂತೆ 33 ಕಿ.ಮೀವರೆಗೂ ಮೈಲೇಜ್, 6 ಲಕ್ಷದಿಂದ ಶುರು!

Top 3 Mileage Sedan Cars: ಭಾರತದ ಕಾರು ಮಾರುಕಟ್ಟೆ ವಿಶಾಲವಾಗಿದ್ದು, ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಹಾಗೂ ಎಂಪಿವಿಗಳು ಖರೀದಿಗೆ ಲಭ್ಯವಿವೆ. ಅದರಲ್ಲೂ ಸೆಡಾನ್‌ಗಳು ಆರಾಮದಾಯಕ ಪ್ರಯಾಣ ಒದಗಿಸಿಬಲ್ಲವು. ಹೀಗಾಗಿ ಬಹುತೇಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ನೀವು ಹೊಚ್ಚ ಹೊಸ ಸೆಡಾನ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಡಿಜೈರ್, ಹೋಂಡಾ ಅಮೇಜ್ ಹಾಗೂ ಟಾಟಾ ಟಿಗೂರ್ ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ, ಈ ಸೆಡಾನ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):

ಇದು ಪ್ರಮುಖವಾಗಿ ಸೆಡಾನ್ ಎಂದೇ ಹೆಸರುವಾಸಿಯಾಗಿದೆ. ಸುಲಭ ಪ್ರಯಾಣ ಹಾಗೂ ಉತ್ತಮ ಇಂಧನ ದಕ್ಷತೆಯಿಂದಲೂ ಗುರುತಿಸಿಕೊಂಡಿದೆ. ಅದಕ್ಕೆ ತಕ್ಕಂತೆ ಕನಿಷ್ಠ ರೂ.6.84 ಲಕ್ಷ ಹಾಗೂ ರೂ.10.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರನ್ನು ಸೆಳೆಯುವಂತಿದೆ.

Top 3 Mileage Sedan Cars In india With Low Price Dzire Amaze Tigor

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24 ರಿಂದ 33 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ನೂತನ ಡಿಜೈರ್ ಕಾರು ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಹಾಗೂ ಗ್ಯಾಲಂಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿದೆ. 5 ಆಸನಗಳನ್ನು ಹೊಂದಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Top 3 Mileage Sedan Cars In india With Low Price Dzire Amaze Tigor

ಹೋಂಡಾ ಅಮೇಜ್ (Honda Amaze):

ಇದೊಂದು ವಿಶ್ವಾಸಾರ್ಹ ಸೆಡಾನ್ ಆಗಿದೆ. ರೂ.8.10 ಲಕ್ಷದಿಂದ ರೂ.11.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವಿ, ವಿಎಕ್ಸ್ ಹಾಗೂ ಝಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ಈ ಕಾರು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 18 ರಿಂದ 19 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. 8-ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ 3-ಸ್ಪೋಕ್ ಸ್ಟೀರಿಂಗ್ ವೀಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 3 Mileage Sedan Cars In india With Low Price Dzire Amaze Tigor

ಟಾಟಾ ಟಿಗೊರ್ (Tata Tigor):

ಇದು ಸುಂದರವಾದ ಸೆಡಾನ್ ಎಂದೇ ಮನೆ ಮಾತಾಗಿದೆ. ಕನಿಷ್ಠ ರೂ.6 ಲಕ್ಷ ಮತ್ತು ರೂ.9.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಸೂಪರ್ನೋವಾ ಕಾಪರ್, ಅರಿಜೋನಾ ಬ್ಲ್ಯೂ ಹಾಗೂ ಡೇಟೋನಾ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು.

ಹೊಸ ಟಿಗೊರ್ 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 28 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಪುಶ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳನ್ನು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Article Published On: Friday, August 29, 2025, 8:30 [IST]
English summary
Top 3 mileage sedan cars in india with low price dzire amaze tigor
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+