Top-3 safest cars: ಅಗ್ಗದ ಬೆಲೆಯ ಟಾಪ್-3 ಗರಿಷ್ಟ ಸುರಕ್ಷತೆಯ ಕಾರುಗಳು!
ಭಾರತದಲ್ಲಿ ಸುರಕ್ಷಿತ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಆರು ಏರ್‌ಬ್ಯಾಗ್‌ಗಳನ್ನು ಒಳಗೊಂಡ ಕನಿಷ್ಟ ಸೇಫ್ಟಿ ಫೀಚರ್ಸ್ ಒದಗಿಸುವ ಕಾರುಗಳನ್ನು ಹುಡುಕುತ್ತಿದ್ದಾರೆ. ಇದರಿಂದಾಗಿ ಕಾರು ತಯಾರಕರು ಕೂಡ ಗರಿಷ್ಟ ಸುರಕ್ಷತೆಯನ್ನು ಒದಗಿಸುವ ಜೊತೆಗೆ ಕಡಿಮೆ ಬೆಲೆಯಲ್ಲಿ ಒಂದಷ್ಟು ಕಾರುಗಳನ್ನು ನೀಡುತ್ತಿದ್ದಾರೆ. ಹಣ ವೆಚ್ಚಿಸಲು ಸಿದ್ದವಿದ್ದರೂ ಯಾವ ಕಾರು ಖರೀದಿಸಬೇಕು ಎಂಬ ಗೊಂದಲದಲ್ಲಿ ಗ್ರಾಹಕರಿದ್ದಾರೆ. ಅಂಥವರಿಗಾಗಿ ಅಗ್ಗದ ಬೆಲೆಯಲ್ಲಿ ಬೆಸ್ಟ್ ಸೇಫ್ಟಿ ಒದಗಿಸುವ ಮೂರು ಪ್ರಮುಖ ಬ್ರಾಂಡ್‌ಗಳ ಮೂರು ಜನಪ್ರಿಯ ಕಾರುಗಳ ಬಗ್ಗೆ ಇಲ್ಲಿ ವಿವರಿಸಿದ್ದೇವೆ.
ಮಹೀಂದ್ರಾ XUV 3XO: ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ (Mahindra) ತನ್ನ XUV300 ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಹೆಚ್ಚು ನವೀಕರಿಸಿದ ಆವೃತ್ತಿಯಾಗಿ ಮಹೀಂದ್ರಾ XUV 3XO ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಮಹೀಂದ್ರಾ XUV 3XO ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ (BNCAP) ಕ್ರ್ಯಾಶ್ ಟೆಸ್ಟ್‌ನಲ್ಲಿ ಉತ್ತಮ ಸುರಕ್ಷತಾ ರೇಟಿಂಗ್ ಗಳಿಸಿದೆ.

ಮಹೀಂದ್ರಾ XUV 3XO (Mahindra XUV 3XO) ಸಬ್ ಕಾಂಪ್ಯಾಕ್ಟ್ ಎಸ್‍ಯುವಿ ಕ್ರ್ಯಾಶ್ ಟೆಸ್ಟ್ ನಲ್ಲಿ ವಯಸ್ಕ ಪ್ರಯಾಣಿಕರ ರಕ್ಷಣೆಯಲ್ಲಿ 32 ರಲ್ಲಿ 29.36 ಅಂಕಗಳನ್ನು ಮತ್ತು ಮಕ್ಕಳ ಪ್ರಯಾಣಿಕರ ರಕ್ಷಣೆಯಲ್ಲಿ 49 ರಲ್ಲಿ 43 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಒಟ್ಟಾರೆ ಸುರಕ್ಷತೆಯಲ್ಲಿ ಮಹೀಂದ್ರಾ XUV 3XO, 5 - ಸ್ಟಾರ್ ಸೇಫ್ಟಿಯನ್ನು ದಕ್ಕಿಸಿಕೊಂಡಿದೆ.
ಮಹೀಂದ್ರಾ XUV 3XO ಎಸ್‍ಯುವಿಯ ಸುರಕ್ಷತ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಒದಗಿಸಲಾಗಿದೆ. ಹೆಚ್ಚುವರಿಯಾಗಿ, ಹೊಸ ಮಹೀಂದ್ರಾ ಸಬ್‌ಕಾಂಪ್ಯಾ ಎಸ್‍ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, EBD ಜೊತೆಗೆ ABS, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಬ್ರೇಕ್ ಡಿಸ್ಕ್ ವೈಪಿಂಗ್ ಒಳಗೊಂಡಿದೆ.

ಹೊಸ ಮಹೀಂದ್ರಾ XUV 3XO ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆಯು ರೂ. 7.79 ಲಕ್ಷದಿಂದ (ಎಕ್ಸ್ ಶೋರೂಂ) ಪ್ರಾರಂಭವಾಗುತ್ತದೆ. ಹೆಚ್ಚುವರಿ ಸುರಕ್ಷತೆಗಾಗಿ ಬೆಲ್ಟ್ ಪ್ರಿಟೆನ್ಷನರ್‌ಗಳು, ಬೆಲ್ಟ್ ಲೋಡ್-ಲಿಮಿಟರ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪಾದಚಾರಿ ರಕ್ಷಣೆ ಮತ್ತು ಸೀಟ್ ಬೆಲ್ಟ್ ರಿಮೈಂಡರ್ ಗಳನ್ನು ಈ ಎಸ್‌ಯುವಿ ಹೊಂದಿವೆ.
ಟಾಟಾ ಕರ್ವ್: ಟಾಟಾ ಮೋಟಾರ್ಸ್ (Tata Motors)ನ ಹೊಸ ಕರ್ವ್ ಕೂಪೆ ಎಸ್‌ಯುವಿ ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಹೊಸ ಟಾಟಾ ಕರ್ವ್ ಕಾರು ಕೂಡ 5 - ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯು ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ (ಭಾರತ್ NCAP) ಅಡಿಯಲ್ಲಿ ಅತ್ಯಂತ ಸುರಕ್ಷಿತ ಕಾರು ಎನ್ನಿಸಿಕೊಂಡಿದೆ.

ಈ ಕ್ರಾಶ್ ಟೆಸ್ಟ್ ನಲ್ಲಿ ವಯಸ್ಕರ ರಕ್ಷಣೆಯಲ್ಲಿ 32 ರಲ್ಲಿ 29.5 ಮತ್ತು ಮಕ್ಕಳ ರಕ್ಷಣೆಯಲ್ಲಿ 49 ರಲ್ಲಿ 43.66 ಅಂಕಗಳನ್ನು ಗಳಿಸಿದೆ. ಒಟ್ಟಾರೆ ಈ ಕಾರು ಸಂಪೂರ್ಣ 5 - ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ. ಟಾಟಾ ಕರ್ವ್ (Tata Curvv) ಎಸ್‍ಯುವಿಯಲ್ಲಿ ಎಲೆಕ್ಟ್ರಾನಿಕ್ ಸ್ಟೇಬಿಲಿಟಿ ಕಂಟ್ರೋಲ್ ಮತ್ತು TPMS ಜೊತೆಗೆ ಆರು ಏರ್‌ಬ್ಯಾಗ್‌ಗಳನ್ನು ಸ್ತ್ಯಾಂಡರ್ಡ್ ಆಗಿ ನೀಡಲಾಗಿದೆ.
ಇದರ ಟಾಪ್ ಎಂಡ್ ರೂಪಾಂತರಗಳಲ್ಲಿ ಎಲ್ಲಾ ಡಿಸ್ಕ್ ಬ್ರೇಕ್‌ಗಳು, 360 - ಡಿಗ್ರಿ ಕ್ಯಾಮೆರಾ, ಲೆವೆಲ್ 2 ಎಡಿಎಎಸ್ ಮತ್ತು ಆಟೋ ಹೋಲ್ಡ್‌ನೊಂದಿಗೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಅನ್ನು ಸಹ ಪಡೆಯುತ್ತವೆ. ಇದರ ಎಲೆಕ್ಟ್ರಿಕ್ ಎಸ್‍ಯುವಿ ಆವೃತ್ತಿಯಲ್ಲಿ ಆರು ಏರ್‌ಬ್ಯಾಗ್‌ಗಳು, ಹಿಲ್-ಸ್ಟಾರ್ಟ್ ಮತ್ತು ಡಿಸೆಂಟ್ ಅಸಿಸ್ಟ್, ESP, ಡ್ರೈವರ್ ಡ್ರೆಸಿನೆಸ್ ಅಲರ್ಟ್ ಸಿಸ್ಟಮ್, ಬ್ಲೈಂಡ್ ಸ್ಪಾಟ್ ಮಾನಿಟರ್, ಲೆವೆಲ್ 2 ADAS ನಂತಹ ಫೀಚರ್ಸ್ ಹೊಂದಿದೆ.
ಟಾಟಾ ಮೋಟಾರ್ಸ್ ಈ ಮಾದರಿಯನ್ನು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳು ಮತ್ತು ಐಷಾರಾಮಿ ಇಂಟೀರಿಯರ್‌ನೊಂದಿಗೆ ಸಜ್ಜುಗೊಳಿಸಿದೆ. ಉತ್ತಮ ಚಾಲನಾ ಅನುಭವಕ್ಕಾಗಿ ಸೌಕರ್ಯ ಮತ್ತು ಪರ್ಫಾಮೆನ್ಸ್ ಎರಡಕ್ಕೂ ಆದ್ಯತೆ ನೀಡಿ ಕಾರನ್ನು ನಿರ್ಮಿಸಲಾಗಿದೆ. ಈ ಕಾರು ಪ್ರಸ್ತುತ ರೂ. 10 ಲಕ್ಷದಿಂದ ಆರಂಭವಾಗಿ ರೂ. 19.20 ಲಕ್ಷದವರಗೆ ಬೆಲೆಯಿದೆ. (ಎಕ್ಸ್ ಶೋರೂಂ ಬೆಲೆಗಳು)
ಮಾರುತಿ ಡಿಜೈರ್: ಮಾರುತಿ ಸುಜುಕಿ ಇತ್ತೀಚೆಗೆ ಬಿಡುಗಡೆ ಮಾಡಿರುವ ನಾಲ್ಕನೇ ತಲೆಮಾರಿನ ಡಿಜೈರ್ (maruti suzuki Dzire) ಕಾರು 5 - ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡಿದೆ. ಕಾರುಗಳ ನಿರ್ಮಾಣ ಗುಣಮಟ್ಟ ಹಾಗೂ ಸುರಕ್ಷತೆಯನ್ನು ನಿರ್ಣಯಿಸುವ ಗ್ಲೋಬಲ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ (GNCAP) ಡಿಜೈರ್ ಅನ್ನು ಮಾರುತಿಯ ಅತ್ಯಂತ ಸುರಕ್ಷಿತ ಕಾರೆಂದು ಘೋಷಿಸಿದೆ.
ಮಾರುತಿ ಸುಜುಕಿ ಡಿಜೈರ್ ಮಾತ್ರ ಈಗ ಎಲ್ಲರನ್ನು ಅಚ್ಚರಿಗೊಳಿಸುವ ರೀತಿಯಲ್ಲಿ ಗ್ಲೋಬಲ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 31.24 ಅಂಕಗಳನ್ನು ಗಳಿಸಿ 5-ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ಹಾಗೆಯೇ ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕಗಳನ್ನು ಪಡೆದು ಗರಿಷ್ಟ ಸುರಕ್ಷತೆಯ ಕಾರೆನಿಸಿಕೊಂಡಿದೆ.
ನಾಲ್ಕನೇ ತಲೆಮಾರಿನ ಡಿಜೈರ್ ಹಲವು ಸೇಫ್ಟಿ ಫೀಚರ್‌ಗಳೊಂದಿಗೆ ಬರುತ್ತದೆ. ಈ ಕಾರಿನಲ್ಲಿ 6 - ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಹಾಗೂ 3 - ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿರುವುದು ದೃಢಪಟ್ಟಿದೆ. ಪ್ರಯಾಣಿಕರ ರಕ್ಷಣೆಗಾಗಿ ಹೊಸ 'ಮಾರುತಿ ಸುಜುಕಿ ಡಿಜೈರ್' ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದಲೇ ಗ್ಲೋಬಲ್ ಎನ್‌ಸಿಎಪಿ ಈ 5 - ಸ್ಟಾರ್ ಸೇಫ್ಟಿ ರೇಟಿಂಗ್ ನೀಡಿದೆ.
ಭಾರತದಲ್ಲಿ ಮಾರುತಿ ಡಿಜೈರ್ ಆರಂಭಿಕ ಬೆಲೆಯು ರೂ. 6.84 ಲಕ್ಷದಿಂದ ರೂ. 10.19 ಲಕ್ಷ (ಎರಡೂ ಬೆಲೆಗಳು, ಎಕ್ಸ್ ಶೋ ರೂಂ) ದವರೆಗೆ ಇದೆ. ಮಾರುತಿ ಸುಜುಕಿ ಡಿಜೈರ್ ಒಳಭಾಗದಲ್ಲಿ ಡ್ಯುಯಲ್-ಟೋನ್ ಬೀಜ್ (ಮೇಲಿನ ವಿಭಾಗ, ಡ್ಯಾಶ್ ಮತ್ತು ಸೀಟುಗಳು) ಮತ್ತು ಬ್ಲಾಕ್ (ಡ್ಯಾಶ್, ಡೋರ್ ಕಾರ್ಡ್‌ಗಳು ಮತ್ತು ಕೆಳಗಿನ ವಿಭಾಗಗಳು) ಥೀಮ್ ನೀಡಿದೆ.
ಮೇಲೆ ತಿಳಿಸಿರುವ ಮೂರು ಕಾರುಗಳು ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಮಾರಾಟದೊಂದಿಗೆ ಮುನ್ನುಗ್ಗುತ್ತಿವೆ. ಸುರಕ್ಷತೆ, ಬೆಲೆ, ಡಿಸೈನ್, ಫೀಚರ್ಸ್ ಸೇರಿದಂತೆ ಹಲವು ವಿಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿವೆ. ಮಧ್ಯಮ ವರ್ಗಕ್ಕೆ ಬಜೆಟ್ ಬೆಲೆಯಲ್ಲಿ ಸಿಗುವ ಈ ಕಾರುಗಳು ತಮ್ಮ ಕುಟುಂಬಕ್ಕೆ ಗರಿಷ್ಟ ಸುರಕ್ಷತೆಯನ್ನು ಒದಗಿಸುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications