ಪ್ರೀಮಿಯಂ ಕಾರುಗಳಂತೆ ಡ್ಯುಯಲ್ ಜೋನ್ AC ಹೊಂದಿರುವ 5 ಅತ್ಯಂತ ಅಗ್ಗದ ಕಾರುಗಳು!

ದೇಶದ ಬಹುತೇಕ ಎಲ್ಲಾ ರಾಜ್ಯಗಳು ಬೇಸಿಗೆಯಲ್ಲಿ ಹೆಚ್ಚಿನ ಬಿಸಿಲನ್ನು ಹೊಂದಿರುವ ಕಾರಣ ಭಾರತೀಯ ಕಾರು ತಯಾರಕರು ಬಲವಾದ ಹವಾನಿಯಂತ್ರಣ (ಎಸಿ) ವ್ಯವಸ್ಥೆಯನ್ನು ಹೊಂದಿರುವ ಕಾರುಗಳನ್ನು ನಿರ್ಮಿಸಲು ಮುಂದಾಗುತ್ತಿದ್ದಾರೆ. ಕಾರಿನ ಒಳಗಿನ ತಾಪಮಾನವನ್ನು ನಿಯಂತ್ರಿಸುವ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಈಗ ಟ್ರೆಂಡಿಂಗ್‌ನಲ್ಲಿರುವ ಪ್ರಮುಖ ಫೀಚರ್ ಆಗಿದೆ. ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ಹೊಂದಿರುವ ಕಾರುಗಳಿಗೆ ದೇಶದಲ್ಲಿ ಭಾರೀ ಬೇಡಿಕೆ ಇದೆ. ಸದ್ಯ ಭಾರತದ ಟಾಪ್ 5 ಅತ್ಯಂತ ಕೈಗೆಟುಕುವ ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ಹೊಂದಿರುವ ಕಾರುಗಳನ್ನು ಇಲ್ಲಿ ಪಟ್ಟಿ ಮಾಡಿದ್ದೇವೆ.

ಚಾಲಕ ಮತ್ತು ಮುಂಭಾಗದ ಪ್ರಯಾಣಿಕರಿಗೆ ಪ್ರತ್ಯೇಕ ತಾಪಮಾನ ಸೆಟ್ಟಿಂಗ್‌ಗಳನ್ನು ಒದಗಿಸುವ ಹೆಚ್ಚು ಅತ್ಯಾಧುನಿಕ ಡ್ಯುಯಲ್-ಜೋನ್ ಕ್ಲೈಮೆಟ್ ಸಿಸ್ಟಮ್ ಇತ್ತೀಚಿನ ವರ್ಷಗಳಲ್ಲಿ ಅನೇಕ ಉನ್ನತ-ಮಟ್ಟದ ಮತ್ತು ಐಷಾರಾಮಿ ವಾಹನಗಳಲ್ಲಿ ಲಭ್ಯವಿದೆ. ಭಾರತದಲ್ಲಿ ಈಗ ಖರೀದಿಗೆ ಲಭ್ಯವಿರುವ ಡ್ಯುಯಲ್-ಜೋನ್ ತಾಪಮಾನ ನಿಯಂತ್ರಣ ಹೊಂದಿರುವ ಟಾಪ್ 5 ಅತ್ಯಂತ ಸಮಂಜಸವಾದ ಬೆಲೆಯ ವಾಹನಗಳನ್ನು ಪರಿಶೀಲಿಸೋಣ.

top-5-affordable-cars-with-dual-zone-ac-feature

ಹ್ಯುಂಡೈ ಕ್ರೆಟಾ: ಹ್ಯುಂಡೈ ಕ್ರೆಟಾದಲ್ಲಿ ಡ್ಯುಯಲ್ ಜೋನ್ ಟೆಂಪರೇಚರ್ ಕಂಟ್ರೋಲ್ ಸಿಸ್ಟಂ ಲಭ್ಯವಿದ್ದು, ಇದರ ಬೆಲೆಯು ಎಕ್ಸ್ ಶೋರೂಂ ದರದಂತೆ ರೂ.14.47 ಲಕ್ಷಗಳಾಗಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್, 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ಕ್ರೆಟಾ ಲಭ್ಯವಿದೆ. ವಿವಿಧ ಗೇರ್ ಬಾಕ್ಸ್ ಆಯ್ಕೆಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್ ಯುವಿ 3ಎಕ್ಸ್ಒ: ಭಾರತದಲ್ಲಿ ಸದ್ಯ ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ಹೊಂದಿರುವ ಏಕೈಕ ಸಬ್ -4-ಮೀಟರ್ ಎಸ್‌ಯುವಿ ಮಹೀಂದ್ರಾ ಎಕ್ಸ್‌ಯುವಿ 3 ಎಕ್ಸ್‌ಒ ಆಗಿದೆ. ಇದರ ಬೆಲೆಗಳು 11.19 ಲಕ್ಷ ರೂ.ಗಳಿಂದ (ಎಕ್ಸ್ ಶೋರೂಂ) ಪ್ರಾರಂಭವಾಗುತ್ತವೆ. ಎರಡು ಪೆಟ್ರೋಲ್ ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆಗಳು ಈ ಕಾರಿನಲ್ಲಿ ಲಭ್ಯವಿದೆ.

top-5-affordable-cars-with-dual-zone-ac-feature

ಕಿಯಾ ಸೆಲ್ಟೋಸ್: ಕಿಯಾ ಸೆಲ್ಟೋಸ್ ಕೂಡ ಎಚ್ ಟಿಎಕ್ಸ್ ಗ್ರೇಡ್ ನಿಂದ ಪ್ರಾರಂಭವಾಗುವ ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ಅನ್ನು ಹೊಂದಿರುವ ವಾಹನಗಳ ಪಟ್ಟಿಯಲ್ಲಿದೆ. ಇದರ ಬೆಲೆ ರೂ. 15.76 ಲಕ್ಷ (ಎಕ್ಸ್ ಶೋರೂಂ) ಇದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ 700: ಮಹೀಂದ್ರಾ ಎಕ್ಸ್‌ಯುವಿ 700, ಎಕ್ಸ್ 7 ಟ್ರಿಮ್ ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ಹೊಂದಿದೆ. ಇದರ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.19.49 ಲಕ್ಷಗಳಾಗಿದೆ. 2.0-ಲೀಟರ್ ಎಂಸ್ಟಾಲಿಯನ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ.

top-5-affordable-cars-with-dual-zone-ac-feature

ಮಹೀಂದ್ರಾ ಸ್ಕಾರ್ಪಿಯೋ-ಎನ್: ಮಹೀಂದ್ರಾ ಝಡ್ 8 ಗ್ರೇಡ್ ನಿಂದ ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ಪ್ರಾರಂಭವಾಗುತ್ತದೆ. ಇದರ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.18.99 ಲಕ್ಷಗಳಾಗಿದೆ. 2.0-ಲೀಟರ್ ಎಂಸ್ಟಾಲಿಯನ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹಾಗೂ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 31, 2025, 15:15 [IST]
English summary
Top 5 affordable cars with dual zone ac feature
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+