6 ಏರ್‌ಬ್ಯಾಗ್‌ಗಳನ್ನು ಹೊಂದಿರುವ ಟಾಪ್ 5 ಎಸ್‌ಯುವಿಗಳಿವು.. ಬಜೆಟ್ ಬೆಲೆ, ಹೆಚ್ಚು ಮೈಲೇಜ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳು ವಿಶಿಷ್ಟವಾದ ಸ್ಥಾನ ಗಳಿಸಿವೆ. ಅದರಲ್ಲೂ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಂಪಿವಿಗಳಿಗೆ ಹೋಲಿಕೆ ಮಾಡಿದರೆ, ಎಸ್‌ಯುವಿಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸದ್ಯ ಸುರಕ್ಷತೆ ಎಂಬುದು ಮಹತ್ವದ ವಿಚಾರವಾಗಿದ್ದು, ಗ್ರಾಹಕರು ಕೂಡ ಅತಿಹೆಚ್ಚು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿರುವ ಕಾರುಗಳನ್ನು ಖರೀದಿ ಮಾಡಲು ಇಷ್ಟಪಡುತ್ತಾರೆ. ನೀವು ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿರುವ ಎಸ್‌ಯುವಿಗಳನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ನಿಸ್ಸಾನ್ ಮ್ಯಾಗ್ನೈಟ್, ಹ್ಯುಂಡೈ ಎಕ್ಸ್‌ಟರ್, ಸ್ಕೋಡಾ ಕೈಲಾಕ್, ಹ್ಯುಂಡೈ ವೆನ್ಯೂ ಹಾಗೂ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಜನಪ್ರಿಯ ಎಸ್‌ಯುವಿಯಾಗಿದ್ದು, ಕನಿಷ್ಠ ರೂ.6.12 ಲಕ್ಷದಿಂದ ರೂ.11.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ. ಇದರೊಟ್ಟಿಗೆ ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್-ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಆಟೋ ಡಿಮ್ಮಿಂಗ್ ಐಆರ್‌ವಿಎಂ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.

ಈ ನಿಸ್ಸಾನ್ ಮ್ಯಾಗ್ನೈಟ್ ಕಾರು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter) ಎಸ್‌ಯುವಿ ರೂ.6.21 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್ ಕಂಟ್ರೋಲ್, ಸೀಟ್‌ಬೆಲ್ಟ್ ರಿಮೈಂಡರ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ಕನಿಷ್ಠ ರೂ.7.89 ಲಕ್ಷ ಮತ್ತು ಗರಿಷ್ಠ ರೂ.14.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಈ ಕಾರು ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಚೈಲ್ಡ್ ಸೀಟ್ ಮೌಂಟ್‌ಗಳು, ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿ, ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಕಡೆಯದಾಗಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ಬಗ್ಗೆ ಮಾತನಾಡುವುದಾದರೆ, ಇದು ಕನಿಷ್ಠ ರೂ.7.99 ಲಕ್ಷ ಮತ್ತು ಗರಿಷ್ಠ ರೂ.15.56 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications