5-ಸೀಟರ್.. 33 ಕಿಲೋಮೀಟರ್‌ವರೆಗೆ ಮೈಲೇಜ್.. 10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪಂಚ ಸೆಡಾನ್‌ಗಳಿವು!
ಭಾರತದ ಕಾರು ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್ ಹಾಗೂ ಎಂಪಿವಿಗಳನ್ನು ಮಾರಾಟ ಮಾಡಲಾಗುತ್ತಿದೆ. ಅದರಲ್ಲೂ ಸೆಡಾನ್‌ಗಳು ಆರಾಮದಾಯಕ ಪ್ರಯಾಣಕ್ಕೆ ಹೆಸರುವಾಸಿಯಾಗಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ ಬೂಟ್ ಸ್ಪೇಸ್‌ನ್ನು ಹೊಂದಿರುತ್ತವೆ. ಈ ಕಾರಣಕ್ಕೆ ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಾರೆ. ನೀವು ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಗೆ 5-ಆಸನಗಳ ಹೊಚ್ಚ ಹೊಸ ಸೆಡಾನ್‌ವೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಡಿಜೈರ್, ಹೋಂಡಾ ಅಮೇಜ್, ಹ್ಯುಂಡೈ ಔರಾ, ಟಾಟಾ ಟಿಗೂರ್ ಹಾಗೂ ಮಾರುತಿ ಸುಜುಕಿ ಸಿಯಾಜ್ ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಡಿಜೈರ್ (Maruti Suzuki Dzire):
ಇದೊಂದು ಜನಪ್ರಿಯ ಸೆಡಾನ್ ಆಗಿದ್ದು, ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 5-ಆಸನಗಳನ್ನು ಒಳಗೊಂಡಿದೆ. 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 24 ರಿಂದ 33 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ಹೋಂಡಾ ಅಮೇಜ್ (Honda Amaze):
ಈ ಸೆಡಾನ್ ರೂ.8.10 ಲಕ್ಷದಿಂದ ರೂ.11.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವಿ, ವಿಎಕ್ಸ್ ಮತ್ತು ಜಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ರೇಡಿಯಂಟ್ ರೆಡ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್ ಮತ್ತು ಗೋಲ್ಡನ್ ಬ್ರೌನ್ ಮೆಟಾಲಿಕ್ ಎಂಬ ಬಣ್ಣಗಳನ್ನು ಪಡೆದಿದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರವಾಸಕ್ಕೆ ಹೋಗುವಾಗ ಲಗೇಜ್ ಸಾಗಿಸಲು 416 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಅಮೇಜ್ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 19.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6-ಸ್ಪೀಕರ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಹ್ಯುಂಡೈ ಔರಾ (Hyundai Aura):
ಇದು ಸಹ ಸೆಡಾನ್ ಆಗಿದೆ. ರೂ.6.54 ಲಕ್ಷದಿಂದ ರೂ.9.11 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರಿನಲ್ಲೂ 5-ಆಸನಗಳಿದ್ದು, 402 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 17 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಟಿಗೂರ್ (Tata Tigor):
ಈ ಸೆಡಾನ್ ರೂ.6 ಲಕ್ಷದಿಂದ ರೂ.9.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5-ಆಸನ ಆಯ್ಕೆ ವ್ಯವಸ್ಥೆಯಿದೆ. 419 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಹೊಂದಿದ್ದು, 19.43 ರಿಂದ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz):
ಇದೊಂದು ಪ್ರಖ್ಯಾತ ಸೆಡಾನ್ ಆಗಿದೆ. ರೂ.9.41 ಲಕ್ಷದಿಂದ ರೂ.12.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರಿನಲ್ಲಿ 5-ಆಸನಗಳಿವೆ. 510 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications