10 ಲಕ್ಷಕ್ಕಿಂತ ಅಗ್ಗ.. ಮೈಲೇಜ್‌ನಲ್ಲೂ ಕಮ್ಮಿಯಿಲ್ಲ, 5-ಸೀಟರ್‌ನ ಜನಪ್ರಿಯ ಎಸ್‌ಯುವಿಗಳಿವು!

ಸಣ್ಣ ಕುಟುಂಬಗಳಿಗೆ ಎಸ್‌ಯುವಿಗಳು ಹೆಚ್ಚು ಸೂಕ್ತವಾಗಲಿವೆ. ಇವು ಆರಾಮದಾಯಕ ಪ್ರಯಾಣವನ್ನು ಒದಗಿಸಲಿದ್ದು, ಸುಲಭವಾಗಿ ದೂರದ ಊರುಗಳಿಗೆ ಸಂಚಾರ ಮಾಡಬಹುದು. ನೀವು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಹೊಚ್ಚ ಹೊಸ ಎಸ್‌ಯುವಿವೊಂದನ್ನು ಖರೀದಿ ಮಾಡಲು ಬಯಸುವಿರಾ.. ಹಾಗಾದರೆ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 5-ಆಸನಗಳ ಮಾರುತಿ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ & ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):

ಇದು ವಿಶ್ವಾಸಾರ್ಹತೆ ಹಾಗೂ ಇಂಧನ ದಕ್ಷತೆಗೆ ಹೆಸರುವಾಸಿಯಾಗಿದ್ದು, ರೂ.8 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೊರಭಾಗದಲ್ಲೂ ಹೆಚ್ಚು ಆಕರ್ಷಕವಾದ ವಿನ್ಯಾಸ ಹೊಂದಿದೆ. ಮ್ಯಾಗ್ಮಾ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಪರ್ಲ್ ಮಿಡ್‌ನೈಟ್‌ ಬ್ಲ್ಯಾಕ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Top 5 Best SUVs Under 10 Lakh Brezza Nexon Sonet Venue XUV 3XO

ಈ ಕಾರು 1.5-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 17 ರಿಂದ 25 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ (Tata Nexon):

ಇದೊಂದು ಜನಪ್ರಿಯ ಎಸ್‌ಯುವಿಯಾಗಿದ್ದು, ಸುರಕ್ಷತೆಯಿಂದಲೇ ಹೆಚ್ಚು ಮನೆ ಮಾತಾಗಿದೆ. ಅದಕ್ಕೆ ತಕ್ಕಂತೆ ರೂ.8 ಲಕ್ಷದಿಂದ ರೂ.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಗ್ರಾಸ್‌ಲ್ಯಾಂಡ್ ಬೀಜ್, ಪ್ಯೂರ್ ಗ್ರೇ ಹಾಗೂ ಓಷನ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Top 5 Best SUVs Under 10 Lakh Brezza Nexon Sonet Venue XUV 3XO

ನೂತನ ನೆಕ್ಸಾನ್ ಎಸ್‌ಯುವಿ ಬಲಿಷ್ಠವಾದ 1.2-ಲೀ. ಟರ್ಬೊ ಪೆಟ್ರೋಲ್, ಸಿಎನ್‌ಜಿ ಮತ್ತು 1.5-ಲೀ. ಡೀಸೆಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 17.01 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 10.25 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಕಿಯಾ ಸೋನೆಟ್ (Kia Sonet)

ಇದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ವಿನ್ಯಾಸ ಹಾಗೂ ತಂತ್ರಜ್ಞಾನದಿಂದಲೇ ಖ್ಯಾತಿಗಳಿಸಿದೆ. ಈ ಕಾರು ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್, 1.0-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 18.4 ರಿಂದ 24.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Top 5 Best SUVs Under 10 Lakh Brezza Nexon Sonet Venue XUV 3XO

ಹ್ಯುಂಡೈ ವೆನ್ಯೂ (Hyundai Venue):

ಈ ಎಸ್‌ಯುವಿಯು ಅತ್ಯಾಧುನಿಕ ವೈಶಿಷ್ಟ್ಯಗಳಿಂದಲೇ ಗುರುತಿಸಿಕೊಂಡಿದೆ. ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್, 1.0-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯೊಂದಿಗೂ ಲಭ್ಯವಿದೆ. 24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ ಕೂಡ 5 ಜನರು ಪ್ರಯಾಣ ಮಾಡಬಹುದು.

ಮಹೀಂದ್ರಾ ಎಕ್ಸ್‌ಯುವಿ 3XO (Mahindra XUV 3XO):

ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಶಕ್ತಿಯುತ ಎಂಜಿನ್ ಹಾಗೂ ಸುರಕ್ಷತಾ ವೈಶಿಷ್ಟ್ಯಗಳಿಂದಲೇ ಹೆಸರುವಾಸಿಯಾಗಿದೆ. ಈ ಕಾರು ರೂ.7.99 ಲಕ್ಷದಿಂದ ರೂ.15.79 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದ್ದು, 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Article Published On: Monday, June 23, 2025, 16:17 [IST]
English summary
This article highlights the top 5 SUVs available in India under 10 lakh, including Tata Nexon, Maruti Brezza, Kia Seltos, Hyundai Venue, and Mahindra XUV 3XO, providing insights into their features and pricing.
Read more on india auto news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+