ಬ್ರೋ.. 26 ಕಿ.ಮೀವರೆಗೆ ಮೈಲೇಜ್, 5-ಸೀಟರ್.. ಈ ಪ್ರಮುಖ ಎಸ್‌ಯುವಿಗಳನ್ನು 10 ಲಕ್ಷದೊಳಗೆ ಮನೆಗೆ ತರಬಹುದು!
ದೇಶದಲ್ಲಿ ಎಸ್‌ಯುವಿಗಳಿಗೆ (ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ದಿನದಿಂದ ದಿನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಆದರೂ ಹೊಸ ಕಾರು ಖರೀದಿಸುವವರು ಗೊಂದಲಕ್ಕೊಳಗಾಗುತ್ತಾರೆ. ನೀವು ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಗೆ ದೊರೆಯುವ ನೂತನ ಎಸ್‌ಯುವಿವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಕಿಯಾ ಸೋನೆಟ್ ಹಾಗೂ ಹ್ಯುಂಡೈ ಎಕ್ಸ್‌ಟರ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ರೂ.8.70 ಲಕ್ಷದಿಂದ ರೂ.14 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಹೊಂದಿದೆ.

ಈ ಕಾರು 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 25 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೆಡ್ಸ್ ಅಪ್ ಡಿಸ್‌ಪ್ಲೇ, ಆಟೊಮೇಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಹಾಗೂ ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ಟಾಟಾ ನೆಕ್ಸಾನ್ (Tata Nexon):
ಇದೊಂದು ಜನಪ್ರಿಯ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ರೂ.8 ಲಕ್ಷದಿಂದ ರೂ.15.60 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಓಷನ್ ಬ್ಲೂ, ಪ್ಯೂರ್ ಗ್ರೇ ಮತ್ತು ಪ್ಯೂರ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ನೂತನ ನೆಕ್ಸಾನ್ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO):
ಈ ಎಸ್‌ಯುವಿಯು ರೂ.8 ಲಕ್ಷದಿಂದ ರೂ.15.80 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್‌ಪ್ಲೇಗಳು ಹಾಗೂ ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆ ಒದಗಿಸಲು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಕಿಯಾ ಸೋನೆಟ್ (Kia Sonet):
ಇದು ರೂ.8 ಲಕ್ಷದಿಂದ ರೂ.15.65 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 18 ರಿಂದ 22 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಜನರು ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ ಮತ್ತು 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹ್ಯುಂಡೈ ಎಕ್ಸ್‌ಟರ್ (Hyundai Exter):
ಈ ಎಸ್‌ಯುವಿಯು ರೂ.6.20 ಲಕ್ಷದಿಂದ ರೂ.10.50 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications