30 ಕಿ.ಮೀಗೂ ಹೆಚ್ಚು ಮೈಲೇಜ್ ನೀಡುವ 5 ಜನಪ್ರಿಯ ಕಾರುಗಳಿವು.. ದುಡ್ಡು ಉಳಿಸಿ, ಬರೀ 3.70 ಲಕ್ಷದಿಂದ ಶುರು!

ಹೊಸ ಕಾರು ಖರೀದಿಸುವವರೂ ಮೈಲೇಜ್‌ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಇದರಿಂದಾಗಿ ದೊಡ್ಡ ಮಟ್ಟದಲ್ಲಿ ಹಣ ಉಳಿಸಲು ಸಾಧ್ಯವಾಗಲಿದೆ. ನೀವು ಗರಿಷ್ಠ ಮೈಲೇಜ್ ನೀಡಬಲ್ಲ ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಆಲ್ಟೊ ಕೆ10, ಮಾರುತಿ ಸುಜುಕಿ ಸೆಲೆರಿಯೊ, ಮಾರುತಿ ಸುಜುಕಿ ಸ್ವಿಫ್ಟ್, ಟೊಯೊಟಾ ಗ್ಲಾನ್ಜಾ ಹಾಗೂ ಮಾರುತಿ ಸುಜುಕಿ ಡಿಜೈರ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):

ಇದೊಂದು ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಗಿದ್ದು, ಕೈಗೆಟುಕುವ ಬೆಲೆಯಲ್ಲಿ ಸಿಗಲಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.3.70 ಲಕ್ಷ ಹಾಗೂ ಗರಿಷ್ಠ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಬಣ್ಣಗಳೊಂದಿಗೂ ದೊರೆಯುತ್ತದೆ. 167 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

Top 5 Cars Above 30 Km Mileage Alto K10 Celerio Swift Glanza And Dzire

ನೂತನ 'ಆಲ್ಟೊ ಕೆ10' ಕಾರು 1-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):

ಈ ಕಾರನ್ನು ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಬಜೆಟ್ ದರದಲ್ಲೂ ಲಭ್ಯವಿದೆ. ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Top 5 Cars Above 30 Km Mileage Alto K10 Celerio Swift Glanza And Dzire

ಹೊಸ 'ಸೆಲೆರಿಯೊ' 1-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಐಡಲ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಮತ್ತು ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಅತಿಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.5.79 ಲಕ್ಷ ಮತ್ತು ಗರಿಷ್ಠ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನಗಳನ್ನು ಪಡೆದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 5 Cars Above 30 Km Mileage Alto K10 Celerio Swift Glanza And Dzire

ಟೊಯೊಟಾ ಗ್ಲಾನ್ಜಾ (Toyota Glanza):

ಈ ಕಾರನ್ನು ಗ್ರಾಹಕರು ಇಷ್ಟಪಟ್ಟಿದ್ದಾರೆ. ದರವು ಅಗ್ಗವಾಗಿದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Top 5 Cars Above 30 Km Mileage Alto K10 Celerio Swift Glanza And Dzire

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):

ಇದೊಂದು ಜಗಮೆಚ್ಚಿದ ಸೆಡಾನ್ ಆಗಿದೆ. ಬೆಲೆಯೂ ಕಡಿಮೆಯಿದೆ. ಕನಿಷ್ಠ ರೂ.6.26 ಲಕ್ಷ ಹಾಗೂ ಗರಿಷ್ಠ 9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.79 ರಿಂದ 33.73 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನಗಳನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Sunday, December 28, 2025, 8:30 [IST]
English summary
Top 5 cars above 30 km mileage alto k10 celerio swift glanza and dzire
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+