ಸ್ವಿಫ್ಟ್‌ನಿಂದ ವ್ಯಾಗನ್ಆರ್‌ವರೆಗೆ.. 2025ರಲ್ಲಿ ಗರಿಷ್ಠ ಮೈಲೇಜ್ ನೀಡಬಲ್ಲ ಟಾಪ್ 5 ಕಾರುಗಳಿವು, ಬೆಲೆ ಎಷ್ಟಿದೆ?
ಹೊಸ ಕಾರು ಖರೀದಿ ಮಾಡಬೇಕು ಎಂಬುದು ಹಲವರ ವರ್ಷಗಳ ಕನಸಾಗಿರುತ್ತದೆ. ಆದರೆ, ಯಾವ ಕಾರನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿರುತ್ತಾರೆ. ನೀವು ಬಜೆಟ್ ದರದಲ್ಲಿ ಉತ್ತಮ ಇಂಧನ ದಕ್ಷತೆ (Fuel Efficiency) ಹೊಂದಿರುವ ನೂತನ ಕಾರೊಂದನ್ನು ಮನೆಗೆ ತರಲು ಹುಡುಕಾಟ ನಡೆಸುತ್ತಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಸ್ವಿಫ್ಟ್, ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್, ಮಾರುತಿ ಸುಜುಕಿ ವ್ಯಾಗನ್ಆರ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಹಾಗೂ ಮಾರುತಿ ಸುಜುಕಿ ಸೆಲೆರಿಯೊ ಕಾರುಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 33 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 265 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 3 ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor):
ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ಕನಿಷ್ಠ ರೂ.7.74 ಲಕ್ಷ ಹಾಗೂ ಗರಿಷ್ಠ ರೂ.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 19 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಟೈಸರ್ ಕಾರಿನಲ್ಲಿ 5 ಆಸನಗಳಿದ್ದು, 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR):
ಈ ಹ್ಯಾಚ್‌ಬ್ಯಾಕ್ ರೂ.5.79 ಲಕ್ಷದಿಂದ ರೂ.7.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 23 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO)
ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಕನಿಷ್ಠ ರೂ.7.99 ಲಕ್ಷ ಮತ್ತು ಗರಿಷ್ಠ ರೂ.15.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.2-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಗಳು ಮತ್ತು 6-ಏರ್‌ಬ್ಯಾಗ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):
ಈ ಹ್ಯಾಚ್‌ಬ್ಯಾಕ್ ರೂ.5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 24 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5-ಆಸನಗಳಿವೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಂಟ್ರಲ್ ಆರ್ಮ್‌ರೆಸ್ಟ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications