ಈ ಮಾರುತಿ ಸುಜುಕಿ ಐರಾವತಗಳು ರೂ.10 ಲಕ್ಷಕ್ಕಿಂತ ಕಮ್ಮಿ ಬೆಲೆಗೆ ಲಭ್ಯ.. 33 Km ವರೆಗೆ ಮೈಲೇಜ್.. 5 ಆಸನಗಳು!
ಮಾರುತಿ ಸುಜುಕಿ (Maruti Suzuki), ನಂಬರ್ 1 ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಮಾರುತಿಗೆ ಸೇರಿದ ಇಗ್ನಿಸ್, ಸ್ವಿಫ್ಟ್, ಡಿಜೈರ್ ಹಾಗೂ ಬ್ರೆಜಾಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):
ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಹಾಗೂ ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಇಗ್ನಿಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಲು ಸಾಧ್ಯವಾಗಲಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 21 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಈ ಹ್ಯಾಚ್‌ಬ್ಯಾಕ್ ದಶಕಗಳಿಂದ ಮನೆ ಮಾತಾಗಿದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಸ್ವಿಫ್ಟ್' 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24.80 ರಿಂದ 32.85 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno):
ಇದು ಪ್ರಮುಖ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ರೂ.5.99 ಲಕ್ಷ ಹಾಗೂ ಗರಿಷ್ಠ ರೂ.9.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):
ಈ ಸೆಡಾನ್‌ನ್ನು ಎಲ್ಲ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 5 ಆಸನಗಳನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಇದೊಂದು ಜಗಮೈಮೆಚ್ಚಿದ ಎಸ್‌ಯುವಿಯಾಗಿದೆ. ರೂ.8.26 ಲಕ್ಷದಿಂದ ರೂ.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17.80 ರಿಂದ 25 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಕೊಂಡಿದೆ.


Click it and Unblock the Notifications








