ಅಣ್ತಮ್ಮಾಸ್: ಈ ಕಾರುಗಳು ಮೈಲೇಜ್‌ನಲ್ಲಿ ಬೈಕ್‌ನ್ನು ಮೀರಿಸುತ್ತವೆ.. ಆಗಂತ ಬೆಲೆಯೇನು ಜಾಸ್ತಿ ಇಲ್ಲ!
ನೂತನ ಕಾರನ್ನು ಮನೆಗೆ ತರಬೇಕು ಎಂಬುದು ಹಲವು ಭಾರತೀಯ ಗ್ರಾಹಕರ ವರ್ಷಗಳ ಕನಸಾಗಿರುತ್ತದೆ. ಆದರೆ, ಬಹುತೇಕ ಖರೀದಿದಾರರಿಗೆ ಯಾವ ಕಾರು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದೆ.. ಗರಿಷ್ಠ ಮೈಲೇಜ್ ನೀಡುತ್ತದೆಯೇ.. ಜೊತೆಗೆ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂದಿದ್ಯಾ ಎಂಬಿತ್ಯಾದಿ ಗೊಂದಲವಿರುತ್ತದೆ. ನಾವಿಲ್ಲಿ ಕೈಗೆಟುಕುವ ಬೆಲೆಯಲ್ಲಿ ಜಾಸ್ತಿ ಮೈಲೇಜ್ ನೀಡಬಲ್ಲ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಟೈಸರ್, ಮಾರುತಿ ಸುಜುಕಿ ಡಿಜೈರ್, ಹ್ಯುಂಡೈ ವೆನ್ಯೂ ಹಾಗೂ ಟೊಯೊಟಾ ಹೈರೈಡರ್ ಕಾರುಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara): ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.20 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.5-ಲೀ. ಸ್ಟ್ರಾಂಗ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರ ಹೈಬ್ರಿಡ್ ರೂಪಾಂತರಗಳು (ವೇರಿಯೆಂಟ್) ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19.38 ರಿಂದ 27.97 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.

ಈ ಗ್ರ್ಯಾಂಡ್ ವಿಟಾರಾ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಜೊತೆಗೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor): ಈ ಎಸ್‌ಯುವಿ ರೂ.7 ಲಕ್ಷದಿಂದ ರೂ.13 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2.ಲೀ. ಪೆಟ್ರೋಲ್, 1-ಲೀ. ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಜೊತೆಗೆ ಮೋಟಾರ್‌ಸೈಕಲ್‌ನಂತೆಯೇ ಇಂಧನ ದಕ್ಷತೆಯನ್ನು ಹೊಂದಿದೆ. ಈ ಕಾರಿನ ಪೆಟ್ರೋಲ್ ರೂಪಾಂತರಗಳು 19.8 ರಿಂದ 22.79 ಕೆಎಂಪಿಎಲ್ ಮತ್ತು ಸಿಎನ್‌ಜಿ ರೂಪಾಂತರಗಳು 28.5 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.

ನೂತನ ಅರ್ಬನ್ ಕ್ರೂಸರ್ ಟೈಸರ್ ಕಾರು, 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಡಿಜೈರ್ (Maruti Suzuki Dzire): ಇದು ಜನಪ್ರಿಯ ಸೆಡಾನ್ ಆಗಿದ್ದು, ರೂ.6 ಲಕ್ಷದಿಂದ ರೂ.10 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಇದರ ಪೆಟ್ರೋಲ್ ರೂಪಾಂತರಗಳು 24.79 ರಿಂದ 25.71 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು 33.73 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ವೆನ್ಯೂ (Hyundai Venue): ಈ ಎಸ್‌ಯುವಿ, ಕನಿಷ್ಠ 8 ಲಕ್ಷ ಮತ್ತು ಗರಿಷ್ಠ ರೂ.13 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 17 ರಿಂದ 22.7 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder): ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.11 ಲಕ್ಷದಿಂದ ರೂ.20 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀ. ಹೈಬ್ರಿಡ್ (ಪೆಟ್ರೋಲ್ +ಎಲೆಕ್ಟ್ರಿಕ್) ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications