27 ಕಿಲೋಮೀಟರ್‌ವರೆಗೆ ಮೈಲೇಜ್.. 6ಕ್ಕೂ ಹೆಚ್ಚು ಆಸನಗಳು, ಬೆಸ್ಟ್ 5 MPVs.. ಬರೀ 5.21 ಲಕ್ಷದಿಂದ ಶುರು!
ಭಾರತದಲ್ಲಿ ಹೊಸ ಕಾರು ಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳಂತೆ ಎಂಪಿವಿಗಳಿಗೂ ಹೆಚ್ಚು ಬೇಡಿಕೆಯಿದೆ. ಇವು ಹೆಚ್ಚಿನ ಆಸನ ಆಯ್ಕೆಯಲ್ಲಿ ಲಭ್ಯವಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಇಕೋ, ರೆನಾಲ್ಟ್ ಟ್ರೈಬರ್, ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯನ್ ಮತ್ತು ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಈ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಇಕೋ (Maruti Suzuki Eeco):
ಇದೊಂದು ಪುಟ್ಟ ಗಾತ್ರದ ಎಂಪಿವಿಯಾಗಿದೆ. ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ವೈಟ್, ಮೆಟಾಲಿಕ್ ಬ್ರಿಸ್ಕ್ ಬ್ಲೂ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2350 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5/6 ಆಸನಗಳನ್ನು ಒಳಗೊಂಡಿದೆ.

ನೂತನ 'ಇಕೋ' ಕಾರು 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19.71 ರಿಂದ 26.78 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೋ ಸಿಸ್ಟಮ್, ಮ್ಯಾನುವಲ್ ಎಸಿ & 12ವಿ-ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಸೀಟ್‌ಬೆಲ್ಟ್ ರಿಮೈಂಡರ್ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಹೊಂದಿದೆ.
ರೆನಾಲ್ಟ್ ಟ್ರೈಬರ್ (Renault Triber):
ಈ ಎಂಪಿವಿಯನ್ನು ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗುತ್ತದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 182 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,636 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಟ್ರೈಬರ್' 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಮ್ಯಾನುವಲ್ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):
ಇದು ಜಗಮೆಚ್ಚಿದ ಎಂಪಿವಿಯಾಗಿದೆ. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 20.30 ರಿಂದ 26.11 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟೊಯೊಟಾ ರೂಮಿಯನ್ (Toyota Rumion):
ಈ ಎಂಪಿವಿಯನ್ನು ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.51 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):
ಇದೊಂದು ಪ್ರಖ್ಯಾತ ಎಂಪಿವಿಯಾಗಿದೆ. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6/7 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








