5-ಸೀಟರ್.. ಬೆಲೆಯೂ ಹೆಚ್ಚಿಲ್ಲ, ಬೊಂಬಾಟ್ ಮೈಲೇಜ್! ಪಂಚ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗಳಿವು
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ಫುಲ್ ಡಿಮ್ಯಾಂಡ್ ಇದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇವುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗಳು ಗ್ರಾಹಕರ ಖರೀದಿಗೆ ಲಭ್ಯವಿವೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಇಗ್ನಿಸ್, ಟೊಯೊಟಾ ಗ್ಲಾನ್ಜಾ, ಮಾರುತಿ ಸುಜುಕಿ ಬಲೆನೊ, ಹ್ಯುಂಡೈ ಐ20 ಹಾಗೂ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಇಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):
ಇದೊಂದು ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ ಹಾಗೂ ಟರ್ಕೋಯಿಸ್ ಬ್ಲ್ಯೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಇಗ್ನಿಸ್' 5 ಆಸನಗಳನ್ನು ಹೊಂದಿದೆ. 1.2-ಲೀ. 4-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 21 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಟೊಯೊಟಾ ಗ್ಲಾನ್ಜಾ (Toyota Glanza):
ಈ ಕಾರು ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಎಂಟೈಸಿಂಗ್ ಸಿಲ್ವರ್, ಸ್ಪೋರ್ಟಿನ್ ರೆಡ್ ಮತ್ತು ಇನ್ಸ್ಟಾ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಗ್ಲಾನ್ಜಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಹೊಂದಿದ್ದು, 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno):
ಇದು ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6 ಏರ್‌ಬ್ಯಾಗ್‌ಗಳು, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಹ್ಯುಂಡೈ ಐ20 (Hyundai i20):
ಈ ಹ್ಯಾಚ್‌ಬ್ಯಾಕ್ ರೂ.6.87 ಲಕ್ಷದಿಂದ ರೂ.10.43 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 16 ರಿಂದ 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಇದೊಂದು ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಆಗಿದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ತನ್ನದಾಗಿಸಿಕೊಂಡಿದೆ. 24.80 ರಿಂದ 32.85 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications