ಬೈಕ್ ಬೆಲೆಗೆ ಕಾರು..! 3.50 ಲಕ್ಷ ಅಷ್ಟೇ, 34 ಕಿ.ಮೀ ಮೈಲೇಜ್.. ಈ ಮಾರುತಿ ಕಾರು ಕೊಳ್ಳಲು 5 ಬಹುಮುಖ್ಯ ಕಾರಣಗಳು
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಕಾರಾಗಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್ ಮಾಡೆಲ್ ಎಂದೇ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನಾವಿಲ್ಲಿ ಇದೇ 'ಎಸ್-ಪ್ರೆಸ್ಸೊ' ಕಾರನ್ನು ಏಕೆ ಖರೀದಿಸಬೇಕು ಎಂಬುದರ ಕುರಿತಂತೆ 5 ಪ್ರಮುಖ ಕಾರಣಗಳನ್ನು ತಿಳಿಸಿಕೊಟ್ಟಿದ್ದೇವೆ.
ಶ್ರೀಸಾಮಾನ್ಯರು ಮಾಲೀಕರಾಗಬಹುದು:
ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಪ್ರೀಮಿಯಂ ಸ್ಕೂಟರ್ ಅಥವಾ ಬೈಕ್ ಬೆಲೆಗೆ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಹೀಗಾಗಿ, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಕೊಂಡುಕೊಳ್ಳಬಹುದಾಗಿದೆ.

ಸರಳವಾದ ವಿನ್ಯಾಸ:
ಈ ಕಾರು ಸ್ಟ್ಯಾಂಡರ್ಡ್, ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಸಾಲಿಡ್ ಫೈರ್ ರೆಡ್, ಸಾಲಿಡ್ ಸಿಜ್ಲ್ ಆರೆಂಜ್, ಪರ್ಲ್ ಸ್ಟಾರಿ ಬ್ಲೂ, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ವೈಟ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಅತ್ಯುತ್ತಮ ಇಂಧನ ದಕ್ಷತೆ:
ಇದು ಉತ್ತಮವಾದ ಇಂಧನ ದಕ್ಷತೆಯಿಂದಲ್ಲೂ ಮನೆ ಮಾತಾಗಿದೆ. 1-ಲೀಟರ್ ಪೆಟ್ರೋಲ್ ಹಾಗೂ 1-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ಪೆಟ್ರೋಲ್ ರೂಪಾಂತರಗಳು 24.12 ರಿಂದ 25.30 ಕಿ.ಮೀ ಮೈಲೇಜ್ ನೀಡುತ್ತವೆ. ಅದೇ ರೀತಿಯಲ್ಲಿ ಸಿಎನ್‌ಜಿ ರೂಪಾಂತರಗಳು 32.73 ಕಿ.ಮೀ ಮೈಲೇಜ್ ಕೊಡುತ್ತವೆ.

ನಗರ ಪ್ರದೇಶಕ್ಕೆ ಹೆಚ್ಚು ಸೂಕ್ತ:
ನೂತನ 'ಮಾರುತಿ ಎಸ್-ಪ್ರೆಸ್ಸೊ' ಸಣ್ಣ ಗಾತ್ರದ ಕಾರಾಗಿದೆ. ಸಂಚಾರ ದಟ್ಟಣೆಯಿರುವ ರಸ್ತೆಗಳಲ್ಲಿಯೂ ಸುಲಭವಾಗಿ ಓಡಿಸಬಹುದು. ಪುಟ್ಟದಾದ ಸ್ಥಳಾವಕಾಶವಿದ್ದರೂ ಲೀಲಾಜಾಲವಾಗಿ ಪಾರ್ಕಿಂಗ್ ಮಾಡಬಹುದು. 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚರಿಸಬಹುದು. ವಿಶೇಷವಾಗಿ ಡ್ರೈವರ್ ಆಸನವು ಎತ್ತರದಲ್ಲಿದ್ದು, ರಸ್ತೆಯೂ ಸಹ ಉತ್ತಮವಾಗಿ ಗೋಚರಿಸುತ್ತದೆ.
ಬೆಲೆಗೆ ತಕ್ಕಂತೆ ಸುಧಾರಿತ ವೈಶಿಷ್ಟ್ಯಗಳು:
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ ಹಾಗೂ ಕೀಲೆಸ್ ಎಂಟ್ರಿಯನ್ನು ಪಡೆದಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
'ಮಾರುತಿ ಎಸ್-ಪ್ರೆಸ್ಸೊ' ಮಾರಾಟ ವಿವರ:
ಈ ಅಕ್ಟೋಬರ್ ತಿಂಗಳು 'ಎಸ್-ಪ್ರೆಸ್ಸೊ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಸರಿ ಸುಮಾರು 2,857 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 2,139 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ಶೇಕಡ 33.57% ಪ್ರಗತಿಯಾಗಿದೆ.
ಒಟ್ಟಾರೆಯಾಗಿ, 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿಯೂ ಉತ್ತಮವಾದ ಬೇಡಿಕೆಯಿದೆ. ಟ್ಯಾಕ್ಸಿ ತೆಗೆದುಕೊಂಡು ಜೀವನ ಸಾಗಿಸುವವರಿಗೂ, ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇದಕ್ಕೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








