Tata: 24 ಕಿ.ಮೀ ಮೈಲೇಜ್.. ಬರೀ 7 ಲಕ್ಷ.. ಈ ನಂ.1 SUV ಖರೀದಿಸಲು 5 ಪ್ರಮುಖ ಕಾರಣಗಳಿವು!

ದೇಶವೇ ಮೆಚ್ಚಿರುವ ನಂಬರ್ 1 ಕಾರಾಗಿ ಟಾಟಾ ನೆಕ್ಸಾನ್ (Tata Nexon) ಹೊರಹೊಮ್ಮಿದೆ. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ನವೆಂಬರ್‌ನಲ್ಲಿಯೂ ಅದು ಮುಂದುವರಿದಿದೆ. ಬರೋಬ್ಬರಿ 22,434 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ನಾವಿಲ್ಲಿ ಇದೇ 'ನೆಕ್ಸಾನ್' ಕಾರನ್ನು ಏಕೆ ಖರೀದಿಸಬೇಕು ಎಂಬುದರ ಕುರಿತಂತೆ 5 ಪ್ರಮುಖ ಕಾರಣಗಳನ್ನು ತಿಳಿಸಿಕೊಟ್ಟಿದ್ದೇವೆ.

ಕೈಗೆಟುಕುವ ಬೆಲೆಯಿಂದಲೇ ಮನೆ ಮಾತಾಗಿದೆ:

'ಟಾಟಾ ನೆಕ್ಸಾನ್' ದುಬಾರಿ ಅಥವಾ ಅಗ್ಗದ ದರಕ್ಕೆ ಸಿಗುವುದಿಲ್ಲ. ಬದಲಾಗಿ ಕೈಗೆಟುಕುವ ಬೆಲೆಯಲ್ಲಿ ಮಾತ್ರ ಗ್ರಾಹಕರ ಖರೀದಿ ಲಭ್ಯವಿದೆ. ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ಕನಿಷ್ಠ ರೂ.7.32 ಲಕ್ಷ ಮತ್ತು ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಮಧ್ಯಮ ವರ್ಗದವರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

Tata 24 7 1 SUV 5

ಅದ್ಭುತ ವಿನ್ಯಾಸ & ನೋಡುಗರ ಕಣ್ಣು ಕುಕ್ಕುವಂತಿದೆ:

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ದಾರಿಹೋಕರನ್ನು ಸೆಳೆಯುವಂತಿದೆ. ಅದಕ್ಕೆ ತಕ್ಕಂತೆ ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ ಹಾಗೂ ಅಟ್ಲಾಸ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಅತ್ಯಾಕರ್ಷಕ ಕ್ಯಾಬಿನ್ & ಹತ್ತಾರು ವೈಶಿಷ್ಟ್ಯಗಳು:

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಏರ್ ಪ್ಯೂರಿಫೈಯರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಕೋಲ್ಡ್ ಗ್ಲೋವ್‌ಬಾಕ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Tata 24 7 1 SUV 5

ಸಾಟಿಯಿಲ್ಲ ಕಾರ್ಯಕ್ಷಮತೆ:

ನೂತನ 'ಟಾಟಾ ನೆಕ್ಸಾನ್' ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್, 1.5 ಲೀ. ಟರ್ಬೋಚಾರ್ಜ್ಡ್ ಡೀಸೆಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಸುರಕ್ಷತೆಗೂ ಹೆಚ್ಚಿನ ಆದ್ಯತೆ:

ಇದು ಜಾಗತಿಕವಾಗಿ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿಯೂ ಯಶಸ್ವಿಯಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 32.22 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.52 ಅಂಕಗಳನ್ನು ಪಡೆದಿದೆ.

Tata 24 7 1 SUV 5

ಹಾಗೆಯೇ ದೇಶದಲ್ಲಿ ಮಾರಾಟವಾಗುವ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ಜರುಗಿಸುವ ಭಾರತ್ ಎನ್‌ಸಿಎಪಿಯು 'ನೆಕ್ಸಾನ್' ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.41 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43.83 ಅಂಕಗಳನ್ನು ಗಳಿಸಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾನ್ನು ಹೊಂದಿದೆ.

ಒಟ್ಟಾರೆಯಾಗಿ, ' ಟಾಟಾ ನೆಕ್ಸಾನ್' ಎಸ್‌ಯುವಿ ಸಾಕಷ್ಟು ಅತ್ಯುತ್ತಮವಾಗಿದೆ. ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿಯೂ ಭರ್ಜರಿ ಬೇಡಿಕೆಯನ್ನು ಹೊಂದಿದೆ. ಮೊದಲ ಬಾರಿಗೆ ಹೊಸದೊಂದು ಕಾರು ಖರೀದಿ ಮಾಡಬೇಕು ಅಂದುಕೊಂಡವರಿಗೆ ಬೆಸ್ಟ್ ಚಾಯ್ಸ್ ಆಗಲಿದೆ. ಇದಕ್ಕೆ ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಸುಜುಕಿ ಬ್ರೆಜಾ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Friday, December 5, 2025, 11:17 [IST]
English summary
Top 5 reasons to buy new tata nexon suv
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+