ಸಖತ್ ಫೇಮಸ್ ಆಗಿರುವ 5 ಸೆಡಾನ್‌ಗಳಿವು: ಬೆಲೆ ಇಷ್ಟೇನಾ.. ವಿಶಾಲ ಆಸನಗಳು, ಹೆಚ್ಚು ಲಗೇಜ್ ಸಾಗಿಸಬಹುದು!

ಭಾರತದ ಕಾರು ಮಾರುಕಟ್ಟೆಯಲ್ಲಿ ಸೆಡಾನ್‌ಗಳಿಗೆ ಪ್ರತ್ಯೇಕವಾದ ಸ್ಥಾನವಿದೆ. ಈ ಕಾರುಗಳು ವಿಶಾಲವಾಗಿರುವ ಆಸನಗಳು ಹಾಗೂ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ದೊಡ್ಡ ಗಾತ್ರದ ಬೂಟ್ ಸ್ಪೇಸ್‌ನ್ನು ಹೊಂದಿರುತ್ತವೆ. ಇದರಿಂದ ಬಹುತೇಕ ಖರೀದಿದಾರರು ಸೆಡಾನ್‌ಗಳನ್ನು ತಮ್ಮ ಕುಟುಂಬದ ವಾಹನವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ನೀವು ಕೂಡ ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಅಮೇಜ್, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ಔರಾ, ಮಾರುತಿ ಸುಜುಕಿ ಡಿಜೈರ್ ಹಾಗೂ ಟಾಟಾ ಟಿಗೂರ್ ಸೆಡಾನ್‌ಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಹೋಂಡಾ ಅಮೇಜ್ (Honda Amaze): ಇದೊಂದು ಪ್ರಖ್ಯಾತ ಸೆಡಾನ್ ಆಗಿದೆ. ರೂ.8.14 ಲಕ್ಷದಿಂದ ರೂ.11.24 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವಿ, ವಿಎಕ್ಸ್ ಹಾಗೂ ಝಡ್ಎಕ್ಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಅಬ್ಸಿಡಿಯನ್ ಬ್ಲೂ, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್ ಹಾಗೂ ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Top 5 Sedans Honda Amaze Maruti Ciaz Hyundai Aura Maruti Dzire And Tata Tigor

ಈ ಹೋಂಡಾ ಅಮೇಜ್ ಸೆಡಾನ್ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18.65 ರಿಂದ 19.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 416 ರಿಂದ 420 ಲೀ. ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ.

ನೂತನ ಅಮೇಜ್ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಎಸಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.

Top 5 Sedans Honda Amaze Maruti Ciaz Hyundai Aura Maruti Dzire And Tata Tigor

ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz): ಈ ಸೆಡಾನ್ ರೂ.9.41 ಲಕ್ಷದಿಂದ ರೂ.12.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 20.04 ರಿಂದ 20.65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಮಾರುತಿ ಸಿಯಾಜ್ ಸೆಡಾನ್‌ನಲ್ಲಿಯೂ 5 ಆಸನಗಳಿವೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೊರಗಡೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 510 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್‌, ಕೀಲೆಸ್ ಎಂಟ್ರಿ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಒಳಗೊಂಡಿದೆ.

Top 5 Sedans Honda Amaze Maruti Ciaz Hyundai Aura Maruti Dzire And Tata Tigor

ಹ್ಯುಂಡೈ ಔರಾ (Hyundai Aura): ಇದು ಕೂಡ ಪ್ರಖ್ಯಾತ ಸೆಡಾನ್ ಆಗಿದ್ದು, ರೂ.6.54 ಲಕ್ಷದಿಂದ ರೂ.9.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದ್ದು, ಟೈಫೂನ್ ಸಿಲ್ವರ್, ಸ್ಟಾರಿ ನೈಟ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ ಮತ್ತು ಟೀಲ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಹ್ಯುಂಡೈ ಔರಾ ಕಾರು 1.2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 28.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲೂ 5 ಮಂದಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 402 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.

Top 5 Sedans Honda Amaze Maruti Ciaz Hyundai Aura Maruti Dzire And Tata Tigor

ಈ ಔರಾ ಸೆಡಾನ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್-ಸ್ಟಾರ್ಟ್ ಅಸಿಸ್ಟ್ ಮತ್ತು ಹಿಲ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire): ಈ ಸೆಡಾನ್ ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ ಹಾಗೂ ವಿಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಪರ್ಲ್ ಆರ್ಕ್ಟಿಕ್ ವೈಟ್, ಬ್ಲ್ಯೂಯಿಷ್ ಬ್ಲ್ಯಾಕ್ ಹಾಗೂ ಮ್ಯಾಗ್ಮಾ ಗ್ರೇಯಂತಹ ಬಣ್ಣಗಳನ್ನು ಹೊಂದಿದೆ.

Top 5 Sedans Honda Amaze Maruti Ciaz Hyundai Aura Maruti Dzire And Tata Tigor

ಹೊಸ ಮಾರುತಿ ಡಿಜೈರ್ ಕಾರು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಜನರು ಪ್ರಯಾಣ ಮಾಡಬಹುದು. ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ.

ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.

ಟಾಟಾ ಟಿಗೂರ್ (Tata Tigor): ಇದು ಸಹ ವಿಶ್ವಾಸಾರ್ಹ ಸೆಡಾನ್ ಆಗಿದ್ದು, ರೂ.6 ಲಕ್ಷದಿಂದ ರೂ.9.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜಡ್ ಹಾಗೂ ಎಕ್ಸ್‌ಜಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ ಮತ್ತು ಅರಿಜೋನಾ ಬ್ಲೂ ಎಂಬ ಆಕರ್ಷಕ ಬಣ್ಣಗಳನ್ನು ಪಡೆದಿದೆ.

ನೂತನ ಟಿಗೂರ್ ಸೆಡಾನ್ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲೂ 5 ಆಸನಗಳಿದ್ದು, ಜಾಸ್ತಿ ಲಗೇಜ್ ಸಾಗಿಸಲು 419 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.

ಹೊಸ ಟಿಗೂರ್ ಕಾರು ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ (10.25-ಇಂಚು), ರೇರ್ ಪಾರ್ಕಿಂಗ್ ಕ್ಯಾಮೆರಾ, ಆಟೋ ಎಸಿ, ಆಟೋ ಹೆಡ್‌ಲೈಟ್‌ಗಳು ಹಾಗೂ 8-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, April 2, 2025, 16:13 [IST]
English summary
Top 5 sedans honda amaze maruti ciaz hyundai aura maruti dzire tata tigor
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+