ಇವೇ ಜನಮೆಚ್ಚಿದ 5 ಎಸ್‌ಯುವಿಗಳು.. ರೂ.7 ಲಕ್ಷದೊಳಗೆ ಲಭ್ಯ, ಪಂಚ ಆಸನಗಳು.. 28 Km ವರೆಗೆ ಮೈಲೇಜ್!
ದೇಶದಲ್ಲಿ ಎಸ್‌ಯುವಿಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗದರೆ ಮಾರುತಿ ಸುಜುಕಿ ಫ್ರಾಂಕ್ಸ್, ರೆನಾಲ್ಟ್ ಕೈಗರ್, ಹ್ಯುಂಡೈ ಎಕ್ಸ್‌ಟರ್, ನಿಸ್ಸಾನ್ ಮ್ಯಾಗ್ನೈಟ್ ಮತ್ತು ಟಾಟಾ ಪಂಚ್ ಎಸ್‌ಯುವಿಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಇದೊಂದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಕನಿಷ್ಠ ರೂ.6.85 ಲಕ್ಷ ಹಾಗೂ ಗರಿಷ್ಠ ರೂ.11.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಮತ್ತು ಅರ್ಥನ್ ಬ್ರೌನ್ ಬಣ್ಣಗಳೊಂದಿಗೂ ಸಿಗುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಫ್ರಾಂಕ್ಸ್' 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ರೆನಾಲ್ಟ್ ಕೈಗರ್ (Renault Kiger):
ಈ ಎಸ್‌ಯುವಿಯು ಪ್ರಖ್ಯಾತ ಕಾರಾಗಿದೆ. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಹಾಗೂ ಪರ್ಲ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,500 ಎಂಎಂ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಕೈಗರ್' 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 19 ರಿಂದ 20.38 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter):
ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಕನಿಷ್ಠ ರೂ.5.68 ಲಕ್ಷ ಮತ್ತು ಗರಿಷ್ಠ ರೂ.9.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಎಂಜಿನ್‌ನ್ನು ಪಡೆದಿದೆ. 19.2 ರಿಂದ 27.1 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):
ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಪಂಚ್ (Tata Punch):
ಇದೊಂದು ನಂಬಿಕಾರ್ಹ ಎಸ್‌ಯುವಿಯಾಗಿದೆ. ಕನಿಷ್ಠ ರೂ.5.50 ಹಾಗೂ ಗರಿಷ್ಠ ರೂ.9.30 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 18.8 ರಿಂದ 26.99 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








