28 ಕಿ.ಮೀವರೆಗೆ ಮೈಲೇಜ್.. 5-ಸೀಟರ್, 6 ಏರ್‌ಬ್ಯಾಗ್‌ಗಳು.. ಈ ಪಂಚ ಎಸ್‌ಯುವಿಗಳು 8 ಲಕ್ಷದೊಳಗೆ ಲಭ್ಯ!

ದೇಶೀಯ ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ಭಾರೀ ಬೇಡಿಕೆಯಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್, ಟಾಟಾ ಪಂಚ್, ರೆನಾಲ್ಟ್ ಕಿಗರ್, ಹ್ಯುಂಡೈ ಎಕ್ಸ್‌ಟರ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor):

ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ರೂ.7.21 ಲಕ್ಷದಿಂದ ರೂ.12.06 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಲ್ಯೂಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Top 5 Suvs Under Rs 8 Lakhs Taisor Punch Kiger Exter And Magnite

ನೂತನ 'ಟೈಸರ್' 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.1 ರಿಂದ 28.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟಾಟಾ ಪಂಚ್ (Tata Punch):

ಈ ಎಸ್‌ಯುವಿಯು ಗ್ರಾಹಕರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಕ್ಯಾಲಿಪ್ಸೊ ರೆಡ್, ಆರ್ಕಸ್ ವೈಟ್ ಮತ್ತು ಸೀವೀಡ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Top 5 Suvs Under Rs 8 Lakhs Taisor Punch Kiger Exter And Magnite

ಹೊಸ 'ಪಂಚ್' ಕಾರು 1.2-ಲೀ. ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 18 ರಿಂದ 26.99 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮತ್ತು ಸನ್‌ರೂಫ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ರೆನಾಲ್ಟ್ ಕೈಗರ್ (Renault Kiger):

ಇದು ಪ್ರಮುಖ ಎಸ್‌ಯುವಿಯಾಗಿದೆ. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.0 ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 19 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 5 Suvs Under Rs 8 Lakhs Taisor Punch Kiger Exter And Magnite

ಹ್ಯುಂಡೈ ಎಕ್ಸ್‌ಟರ್‌ (Hyundai Exter):

ಈ ಎಸ್‌ಯುವಿಯನ್ನು ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ರೂ.5.68 ಲಕ್ಷದಿಂದ ರೂ.9.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27 ಕಿ.ಮೀವರೆಗೆ ಮೈಲೇಜ್ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Top 5 Suvs Under Rs 8 Lakhs Taisor Punch Kiger Exter And Magnite

ನಿಸ್ಸಾನ್ ಮ್ಯಾಗ್ನೈಟ್ (Nissan Magnite):

ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 17.9 ರಿಂದ 19.9 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Saturday, November 22, 2025, 21:45 [IST]
English summary
Top 5 suvs under rs 8 lakhs taisor punch kiger exter and magnite
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+