7-ಸೀಟರ್ SUV ಹುಡುಕುತ್ತಿದ್ದೀರಾ.. ಈ ಪಂಚ ಕಾರುಗಳು ಬೆಸ್ಟ್, ಬೆಲೆ ಎಷ್ಟು.. ಹೇಗಿವೆ?
ಹೊಸ ಕಾರು ಖರೀದಿ ಮಾಡಬೇಕೆಂಬುದು ಸಾವಿರಾರು ಜನರ ಆಸೆಯಾಗಿದೆ. ಬಹುತೇಕರಿಗೆ ಫ್ಯಾಮಿಲಿ ಎಸ್‌ಯುವಿಗಳ ಮೇಲೆ ಕಣ್ಣಿರುತ್ತದೆ. ಅದಕ್ಕಾಗಿ ವಿವಿಧ ಕಂಪನಿಗಳ ಶೋರೂಂನ್ನು ಎಡತಾಕುತ್ತಾರೆ. ಆದರೆ, ಮನಸ್ಸಿಗೆ ಸಮಾಧಾನವೆನಿಸುವ ಕಾರು ಸಿಗುವುದಿಲ್ಲ. ಅಂತಹವರಿಗೆ 7 ಆಸನ ಹೊಂದಿರುವ ಟಾಟಾ ಸಫಾರಿ, ಮಹೀಂದ್ರಾ ಸ್ಕಾರ್ಪಿಯೋ ಎನ್, ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್, ಮಹೀಂದ್ರಾ ಎಕ್ಸ್‌ಯುವಿ700 ಹಾಗೂ ಮಹೀಂದ್ರಾ ಬೊಲೆರೊ ಎಸ್‌ಯುವಿಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಟಾಟಾ ಸಫಾರಿ (Tata Safari):
ಇದು ಜನಪ್ರಿಯ ಎಸ್‌ಯುವಿಯಾಗಿದೆ. ಕನಿಷ್ಠ ರೂ.14.66 ಲಕ್ಷ ಹಾಗೂ ಗರಿಷ್ಠ ರೂ.25.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್ & ಸೂಪರ್‌ನೋವಾ ಕಾಪರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 6/ 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ಹೊಸ 'ಸಫಾರಿ' 2-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 16 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N):
ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದೆ. ರೂ.13.20 ಲಕ್ಷದಿಂದ ರೂ.24.17 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಮಿಡ್‌ನೈಟ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಡೀಪ್ ಫಾರೆಸ್ಟ್ ಮತ್ತು ನಪೋಲಿ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 6/ 7 ಆಸನಗಳನ್ನು ಹೊಂದಿದೆ.

ನೂತನ 'ಮಹೀಂದ್ರಾ ಸ್ಕಾರ್ಪಿಯೋ' 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 16 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 165 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic):
ಇದು ಪ್ರಖ್ಯಾತ ಫ್ಯಾಮಿಲಿ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಕನಿಷ್ಠ ರೂ.12.98 ಲಕ್ಷ ಮತ್ತು ಗರಿಷ್ಠ ರೂ.16.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/ 9 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700):
ಈ ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.13.66 ಲಕ್ಷದಿಂದ ರೂ.23.71 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 17 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 6/ 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸನ್‌ರೂಫ್ ಹಾಗೂ 7 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಹೀಂದ್ರಾ ಬೊಲೆರೊ (Mahindra Bolero):
ಇದು ಎಸ್‌ಯುವಿಯಾಗಿದೆ. ಕನಿಷ್ಠ ರೂ.7.99 ಲಕ್ಷ ಹಾಗೂ ಗರಿಷ್ಠ ರೂ.9.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 14 ರಿಂದ 16 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








