ಬೈಕ್‌ನಂತೆ ಮೈಲೇಜ್.. 5-ಸೀಟರ್, ಅಗ್ಗದ ದರದಲ್ಲಿ ಈ 8 ಸಣ್ಣ ಕಾರುಗಳು ಲಭ್ಯ.. ಬರೀ ರೂ.3.50 ಲಕ್ಷದಿಂದ ಶುರು!

ಹೊಸ ಕಾರು ಖರಿದಿಸಬೇಕೆಂದು ಬಹುತೇಕರ ಜೀವನಮಾನದ ಆಸೆಯಾಗಿರುತ್ತದೆ. ಅದಕ್ಕಾಗಿ ತಮ್ಮ ಕುಟುಂಬಕ್ಕೆ ಹೆಚ್ಚು ಸೂಕ್ತವಾಗಬಲ್ಲ ಕಾರನ್ನು ಖರೀದಿಸಲು ಹುಡುಕಾಟ ನಡೆಸುತ್ತಿರುತ್ತಾರೆ. ನೀವು ಅಗ್ಗದ ದರದಲ್ಲಿ ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಬೇಕೇ.. ಹಾಗಾದರೆ ಈ 8 ಹ್ಯಾಚ್‌ಬ್ಯಾಕ್‌ಗಳಾದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಾರುತಿ ಸುಜುಕಿ ಆಲ್ಟೊ ಕೆ10, ರೆನಾಲ್ಟ್ ಕ್ವಿಡ್, ಮಾರುತಿ ಸುಜುಕಿ ವ್ಯಾಗನ್ಆರ್, ಟಾಟಾ ಟಿಯಾಗೊ, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಆಲ್ಟ್ರೋಜ್ ಹಾಗೂ ಸಿಟ್ರನ್ ಸಿ3ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):

ಇದು ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಪೆಟ್ರೋಲ್ ಮತ್ತು 1-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 24 ರಿಂದ 32 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ಒಳಗೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Top 8 Affordable Small Cars S-Presso Alto Kwid WagonR Tiago Celerio Altroz and C3

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):

ಈ ಹ್ಯಾಚ್‌ಬ್ಯಾಕ್‌ ದಶಕಗಳಿಂದ ಖರೀದಿದಾರರ ನೆಚ್ಚಿನ ಕಾರಾಗಿದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ರೆನಾಲ್ಟ್ ಕ್ವಿಡ್ (Renault Kwid):

ಇದು ಸಣ್ಣ ಗಾತ್ರದ ಕಾರಾಗಿದೆ. ರೂ.4.30 ಲಕ್ಷದಿಂದ ರೂ.5.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 22 ಕಿ.ಮೀವರೆಗೆ ನೀಡುತ್ತದೆ. 5-ಆಸನಗಳನ್ನು ಪಡೆದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top 8 Affordable Small Cars S-Presso Alto Kwid WagonR Tiago Celerio Altroz and C3

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR):

ಈ ಕಾರನ್ನು ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಯಾವುದೇ ಬೈಕ್‌ಗೂ ಕಮ್ಮಿಯಿಲ್ಲವೆಂಬಂತೆ 23 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಟಿಯಾಗೊ (Tata Tiago):

ಇದೊಂದು ನಂಬಿಕಾರ್ಹ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಎಲ್ಲ ವರ್ಗದವರಿಗೂ ಸುಲಭವಾಗಿ ಕೈಗೆಟುಕುತ್ತದೆ. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 20 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ಹೊಂದಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 2 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Top 8 Affordable Small Cars S-Presso Alto Kwid WagonR Tiago Celerio Altroz and C3

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):

ಈ ಕಾರನ್ನು ಪ್ರತಿಯೊಬ್ಬರು ಮೆಚ್ಚಿದ್ದಾರೆ. ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸಾಕಷ್ಟು ಶಕ್ತಿಶಾಲಿಯಾದ 1-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 25 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟಾಟಾ ಆಲ್ಟ್ರೋಜ್ (Tata Altroz):

ಇದು ಜಗಮೆಚ್ಚಿದ ಹ್ಯಾಚ್‌ಬ್ಯಾಕ್‌ ಆಗಿದೆ. ರೂ.6.30 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. ಸಾಮಾನ್ಯ ಬೈಕ್‌ಗಳಂತೆ 19 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ಹೊಂದಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Top 8 Affordable Small Cars S-Presso Alto Kwid WagonR Tiago Celerio Altroz and C3

ಸಿಟ್ರನ್ ಸಿ3 (Citroen C3):

ಈ ಕಾರನ್ನು ಶ್ರೀಸಾಮಾನ್ಯರು ಖರೀದಿ ಮಾಡಬಹುದು. ರೂ.4.80 ಲಕ್ಷದಿಂದ ರೂ.10.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5-ಆಸ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Friday, November 21, 2025, 15:47 [IST]
English summary
Top 8 affordable small cars s presso alto kwid wagonr tiago celerio altroz and c3
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+