ಕಾರಿಗೂ ಮೀರಿಸುವ ವೈಶಿಷ್ಟ್ಯಗಳು.. ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್‌ಗಳಿವು, ಬೆಲೆ ಎಷ್ಟು.. ವಿಶೇಷತೆಗಳೇನು?

ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ದಿನದಿಂದ ದಿನಕ್ಕೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸುತ್ತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಬಜಾಜ್ ಚೇತಕ್, ಟಿವಿಎಸ್ ಐಕ್ಯೂಬ್, ಓಲಾ ಎಸ್1 ಎಕ್ಸ್, ಎಥರ್ ರಿಜ್ಟಾ, ಹೀರೋ ವಿಡಾ ವಿ2, ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಹಾಗೂ ಆಕ್ಟಿವಾ ಇ ಮಾಡೆಲ್‌ಗ‌ಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಶತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಮೊದಲಿಗೆ ಬಜಾಜ್ ಚೇತಕ್ (Bajaj Chetak) ಇ-ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ಹಲವು ರೂಪದಲ್ಲಿ ಖರೀದಿಗೆ ಲಭ್ಯವಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ 2901 ಮಾಡೆಲ್, ರೂ.99,998 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.88 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 123 ಕಿಲೋಮೀಟರ್ ರೇಂಜ್ (ಮೈಲೇಜ್) ಓಡುತ್ತದೆ.

Top 8 Electric Scooters Under Rs 1 5 Lakh Price Chetak iQube S1X Rizta Activa e And Vida v2

ಈ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್, 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಕಲರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ರೆಡ್, ಸೈಬರ್ ವೈಟ್ ಹಾಗೂ ಲೈಮ್ ಯೆಲ್ಲೋ ಒಳಗೊಂಡಂತೆ ನಾನಾ ಬಗೆಯ ಬಣ್ಣಗಳೊಂದಿಗೂ ಸಿಗುತ್ತದೆ.

ಟಿವಿಎಸ್ ಐಕ್ಯೂಬ್ (TVS iQube) ಕೂಡ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ 2.2 ಕೆಡಬ್ಲ್ಯೂಹೆಚ್ ಬ್ಯಾಟರಿ ಹೊಂದಿರುವ ಮಾಡೆಲ್, ರೂ.1.07 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 75 ಕಿಲೋಮೀಟರ್ ಕ್ರಮಿಸುತ್ತದೆ. 75 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Top 8 Electric Scooters Under Rs 1 5 Lakh Price Chetak iQube S1X Rizta Activa e And Vida v2

ನೂತನ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ನ 2.2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಕೇವಲ 2 ಗಂಟೆಗಳಲ್ಲಿ 0 ರಿಂದ 80% ಚಾರ್ಜ್ ಆಗುತ್ತದೆ. 5-ಇಂಚಿನ ಟಿಎಫ್‌ಟಿ ಸ್ಕ್ರೀನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ವೆಹಿಕಲ್ ಕ್ರ್ಯಾಶ್-ಟೌ ಅಲರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ವಾಲ್ನಟ್ ಬ್ರೌನ್ ಹಾಗೂ ಪರ್ಲ್ ವೈಟ್ ಬಣ್ಣಗಳನ್ನು ಪಡೆದಿದೆ.

ಓಲಾ ಎಸ್1 ಎಕ್ಸ್ (Ola S1X) ಬಗ್ಗೆ ಹೇಳುವುದಾದರೆ, ಇದು ಮೂರು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದುಕೊಂಡಿರುವ ಮಾಡೆಲ್, ರೂ.79,999 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 108 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

Top 8 Electric Scooters Under Rs 1 5 Lakh Price Chetak iQube S1X Rizta Activa e And Vida v2

ಈ ಓಲಾ ಎಸ್1 ಎಕ್ಸ್ 2 ಕೆಡಬ್ಲ್ಯೂಹೆಚ್ ಮಾಡೆಲ್ 101 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ವೈಟ್, ಬ್ಲ್ಯೂ, ರೆಡ್, ಸಿಲ್ವರ್ ಹಾಗೂ ಬ್ಲ್ಯಾಕ್ ಒಳಗೊಂಡಂತೆ 5 ಬಣ್ಣಗಳೊಂದಿಗೂ ಸಿಗುತ್ತದೆ.

ಎಥರ್ ರಿಜ್ಟಾ (Ather Rizta) ಎಲೆಕ್ಟ್ರಿಕ್ ಸ್ಕೂಟರ್ ಕುರಿತಂತೆ ತಿಳಿಸುವುದಾದರೆ, ಇದು ಕನಿಷ್ಠ ರೂ.1.11 ಲಕ್ಷ ಹಾಗೂ ಗರಿಷ್ಠ ರೂ.1.47 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್ ಕ್ರಮಿಸುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

Top 8 Electric Scooters Under Rs 1 5 Lakh Price Chetak iQube S1X Rizta Activa e And Vida v2

ಈ ಎಥರ್ ರಿಜ್ಟಾ ಇ-ಸ್ಕೂಟರ್ ಸ್ಮಾರ್ಟ್, ಇಕೋ ಮತ್ತು ಜಿಪ್ ಎಂಬ 3 ರೈಡಿಂಗ್ ಮೋಡ್‌ನ್ನು ಪಡೆದಿದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಸಿಯಾಚಿನ್ ವೈಟ್ ಮೊನೊ, ಡೆಕ್ಕನ್ ಗ್ರೇ ಮೊನೊ ಹಾಗೂ ಪ್ಯಾಂಗೊಂಗ್ ಬ್ಲೂ ಡ್ಯುಯೊ ಸೇರಿದಂತೆ ವಿವಿಧ ಬಣ್ಣಗಳನ್ನು ದೊರೆಯುತ್ತದೆ.

ಹೀರೋ ವಿಡಾ ವಿ2 ಲೈಟ್ (hero vida v2 lite) ಕೂಡ ಖರೀದಿಗೆ ಲಭ್ಯವಿದೆ. ಈ ಸ್ಕೂಟರ್ ರೂ.96,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 94 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

ನೂತನ ವಿಡಾ ವಿ2 ಲೈಟ್ ಎಲೆಕ್ಟ್ರಿಕ್ ಸ್ಕೂಟರ್ 69 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ರೈಡ್ & ಇಕೋ ಎಂಬ ಮೂರು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (7-ಇಂಚು), ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರೀ-ಜೆನ್ ಬ್ರೇಕಿಂಗ್, ಕೀಲೆಸ್ ಎಂಟ್ರಿ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract) ಇ-ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.1.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಆದರೆ, ಆರಂಭಿಕ ಕೊಡುಗೆಯಾಗಿ ರೂ.1.20 ಲಕ್ಷಕ್ಕೆ (ಎಕ್ಸ್-ಶೋರೂಂ) ಖರೀದಿಗೆ ಲಭ್ಯವಿದೆ. ಈಗಾಗಲೇ 50,000ಕ್ಕೂ ಅಧಿಕ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2026ರ ಮೊದಲ ತ್ರೈಮಾಸಿಕದಲ್ಲಿ ವಿತರಣೆಗಳು ಸಹ ಪ್ರಾರಂಭವಾಗುವ ಸಾಧ್ಯತೆಯಿದೆ.

ಈ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್ ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 261 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಎಆರ್‌ಎಎಸ್ (ಅಡ್ವಾನ್ಸ್ಡ್ ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು, ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್ ಮತ್ತು ಹಿಲ್-ಹೋಲ್ಡ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿವರ್ ಇಂಡೀ (River Indie) ಎಲೆಕ್ಟ್ರಿಕ್ ಕುರಿತಂತೆ ತಿಳಿಸುವುದಾದರೆ, ಇದು ರೂ.1.43 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 161 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರ ಬ್ಯಾಟರಿ ಪ್ಯಾಕ್ 5 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗಿ ಬಿಡುತ್ತದೆ.

ಕಡೆಯದಾಗಿ ಹೋಂಡಾ ಆಕ್ಟಿವಾ ಇ (Honda Activa e) ಬಗ್ಗೆ ಮಾತನಾಡುವುದಾದರೆ, ಈ ಸ್ಕೂಟರ್‌ನ ಸ್ಟ್ಯಾಂಡರ್ಡ್ ಮಾಡೆಲ್ ರೂ.1.17 ಲಕ್ಷ ಹಾಗೂ ರೋಡ್‌ಸಿಂಕ್ ಮಾಡೆಲ್ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಇದು 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಕ್ರಮಿಸುತ್ತದೆ.

ಹೊಸ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಹೆಚ್-ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 31, 2025, 15:43 [IST]
English summary
Top 8 electric scooters under rs 1 5 lakh price chetak iqube s1x rizta activa e and vida v2
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+