ಈ ಜನಪ್ರಿಯ ಎಸ್‌ಯುವಿಗಳು ರೂ.12 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಲಭ್ಯ.. 5-ಸೀಟರ್, ಭಾರೀ ಮೈಲೇಜ್!

ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಎಸ್‌ಯುವಿಯೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ರೂ.12 ಲಕ್ಷದೊಳಗೆ ಲಭ್ಯವಾಗುವ ಟಾಟಾ ಪಂಚ್, ಹ್ಯುಂಡೈ ಎಕ್ಸ್‌ಟರ್, ಕಿಯಾ ಸೈರಸ್, ಸ್ಕೋಡಾ ಕೈಲಾಕ್, ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಫ್ರಾಂಕ್ಸ್, ಮಾರುತಿ ಸುಜುಕಿ ಬ್ರೆಝಾ ಹಾಗೂ ಹೋಂಡಾ ಎಲಿವೇಟ್‌ ಕಾರುಗಳು ಹೆಚ್ಚು ಸೂಕ್ತವಾಗಲಿವೆ.

ಮೊದಲಿಗೆ ಟಾಟಾ ಪಂಚ್ (Tata Punch) ಎಸ್‌ಯುವಿ ಕಾರಿನ ಬಗ್ಗೆ ಮಾತನಾಡೋಣ. ಇದು ರೂ.6.20 ಲಕ್ಷದಿಂದ ರೂ.10.32 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು 1.2-ಲೀ. ಪೆಟ್ರೋಲ್ ಎಂಜಿನ್ & ಸಿಎನ್‌ಜಿ ಆಯ್ಕೆಯನ್ನು ಪಡೆದಿದೆ. 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು.

Top 8 Suvs Under Rs 12 Lakhs Good Mileage Punch Syros Kylaq Creta To Brezza

ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಸನ್‌ರೂಫ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಎರಡು ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಹ್ಯುಂಡೈ ಎಕ್ಸ್‌ಟರ್ (Hyundai Exter) ಕೂಡ ಪ್ರಮುಖ ಎಸ್‌ಯುವಿಯಾಗಿದೆ. ಈ ಕಾರು ರೂ.6.21 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 19.2 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Top 8 Suvs Under Rs 12 Lakhs Good Mileage Punch Syros Kylaq Creta To Brezza

ಕಿಯಾ ಸೈರಸ್ (Kia Syros) ಎಸ್‌ಯುವಿ ಕುರಿತಂತೆ ಹೇಳುವುದಾದರೆ, ಇದು ರೂ.8.99 ರಿಂದ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು.

ಈ ಕಿಯಾ ಸೈರಸ್ ಕಾರು ಸಹ ಇನ್ಫೋಟೈನ್‌ಮೆಂಟ್‌ ಸಿಸ್ಟಮ್ ಮತ್ತು ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಜೋನ್ ಎಸಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Top 8 Suvs Under Rs 12 Lakhs Good Mileage Punch Syros Kylaq Creta To Brezza

ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ ಬಗ್ಗೆ ತಿಳಿಯುವುದಾದರೆ, ಈ ಕಾರು ಕನಿಷ್ಠ ರೂ.7.89 ಲಕ್ಷ ಹಾಗೂ ಗರಿಷ್ಠ ರೂ.14.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.0-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯೂ ಇದ್ದು. ಡಿಸ್ಕ್/ ಡ್ರಮ್‌ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ನೂತನ ಸ್ಕೋಡಾ ಕೈಲಾಕ್ ಕಾರು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ (8-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟು-ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಚೈಲ್ಡ್ ಸೀಟ್ ಮೌಂಟ್‌ಗಳನ್ನು ಒಳಗೊಂಡಿದೆ.

Top 8 Suvs Under Rs 12 Lakhs Good Mileage Punch Syros Kylaq Creta To Brezza

ಹ್ಯುಂಡೈ ಕ್ರೆಟಾ (Hyundai Creta) ಕೂಡ ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ರೂ.11 ರಿಂದ ರೂ.20.42 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿಯೂ 5 ಜನರು ಓಡಾಟ ನಡೆಸಬಹುದು.

ಹೊಸ ಹ್ಯುಂಡೈ ಕ್ರೆಟಾ ಎಸ್‌ಯುವಿ ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, ಡುಯಲ್-ಝೋನ್ ಎಸಿ, 8 ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಆಯ್ಕೆಯನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ ಸಹ 5 ಮಂದಿ ಪ್ರಯಾಣ ಮಾಡಬಹುದು.

ಈ ಕಾರು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ವಿಶೇಷವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಸಹ ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ರೂ.8.69 ಲಕ್ಷದಿಂದ ರೂ.14.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿಯೂ 5 ಜನರು ಓಡಾಟ ನಡೆಸಬಹುದು.

ನೂತನ ಮಾರುತಿ ಬ್ರೆಝಾ ಎಸ್‌ಯುವಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಕಡೆಯದಾಗಿ ಹೋಂಡಾ ಎಲಿವೇಟ್‌ (Honda Elevate) ಎಸ್‌ಯುವಿ ವಿಶೇಷತೆಗಳ ಕುರಿತಂತೆ ಹೇಳುವುದಾದರೆ, ಈ ಕಾರು ರೂ.11.91 ಲಕ್ಷದಿಂದ ರೂ.16.73 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, March 29, 2025, 21:48 [IST]
English summary
Top 8 suvs under rs 12 lakhs good mileage punch syros kylaq creta to brezza
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+