6 & 7-ಸೀಟರ್‌ನ 5 ಜನಪ್ರಿಯ ಕಾರುಗಳಿವು: 12 ರಿಂದ 26 ಕಿ.ಮೀವರೆಗೆ ಮೈಲೇಜ್.. ರೂ.20 ಲಕ್ಷದೊಳಗೆ ಲಭ್ಯ!

ಭಾರತವು ವಿಶಾಲವಾದ ಕಾರು ಮಾರುಕಟ್ಟೆಯನ್ನು ಹೊಂದಿದೆ. ಇಲ್ಲಿ ಹತ್ತಾರು ಕಾರುಗಳು ಗ್ರಾಹಕರ ಖರೀದಿಗೆ ಲಭ್ಯವಿವೆ. ಆದರಲ್ಲೂ ಫ್ಯಾಮಿಲಿ ಕಾರುಗಳಿಗೆ ವಿಶೇಷವಾದ ಬೇಡಿಕೆಯಿದೆ. ನೀವು 7 ಆಸನಗಳನ್ನು ಹೊಂದಿರುವ ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಕಿಯಾ ಕ್ಯಾರೆನ್ಸ್ ಕ್ಲಾವಿಸ್, ಮಾರುತಿ ಸುಜುಕಿ ಎಕ್ಸ್ಎಲ್6, ಮಹೀಂದ್ರಾ ಸ್ಕಾರ್ಪಿಯೋ ಎನ್, ಟಾಟಾ ಸಫಾರಿ ಹಾಗೂ ಟೊಯೊಟಾ ಇನ್ನೋವಾ ಹೈಕ್ರಾಸ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದೊಂದು ಜನಪ್ರಿಯವಾದ ಎಂಪಿವಿಯಾಗಿದೆ. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಪ್ಯೂಟರ್ ಆಲಿವ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 195 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Top Five 6 and 7 Seater Cars Under Rs 20 Lakh Carens Clavis XL6 Scorpio Safari And Innova

ನೂತನ 'ಕ್ಯಾರೆನ್ಸ್ ಕ್ಲಾವಿಸ್' ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 15.95 ರಿಂದ 19.54 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 6 ಹಾಗೂ 7 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6):

ಈ ಎಂಪಿವಿಯು ಪ್ರಖ್ಯಾತ ಫ್ಯಾಮಿಲಿ ಕಾರಾಗಿ ಹೊರಹೊಮ್ಮಿದೆ. ರೂ.11.52 ಲಕ್ಷದಿಂದ ರೂ.14.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,740 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Top Five 6 and 7 Seater Cars Under Rs 20 Lakh Carens Clavis XL6 Scorpio Safari And Innova

ಹೊಸ 'ಮಾರುತಿ ಎಕ್ಸ್ಎಲ್6' ಎಂಪಿವಿ, 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.97 ರಿಂದ 26.32 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 6 ಆಸನಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N):

ಇದು ಪ್ರಮುಖ ಎಸ್‌ಯುವಿಯಾಗಿದೆ. ರೂ.13.20 ಲಕ್ಷದಿಂದ ರೂ.24.17 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 2.2-ಲೀ. ಡೀಸೆಲ್ ಮತ್ತು 2.0-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 12 ರಿಂದ 15.94 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 6/ 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Top Five 6 and 7 Seater Cars Under Rs 20 Lakh Carens Clavis XL6 Scorpio N Safari And Innova

ಟಾಟಾ ಸಫಾರಿ (Tata Safari):

ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.14.66 ಲಕ್ಷದಿಂದ ರೂ.25.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14 ರಿಂದ 16 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 6/ 7 ಆಸನಗಳನ್ನು ಹೊಂದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಸನ್‌ರೂಫ್, ಆಟೋಮೆಟಿಕ್ ಎಸಿ ಹಾಗೂ 7 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Top Five 6 and 7 Seater Cars Under Rs 20 Lakh Carens Clavis XL6 Scorpio Safari And Innova

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಇದೊಂದು ಜಗಮೆಚ್ಚಿದ ಎಂಪಿವಿಯಾಗಿದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2-ಲೀ. ಪೆಟ್ರೋಲ್, 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 7/ 8 ಆಸನಗಳನ್ನು ಪಡೆದಿದೆ. 23 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಆಟೋ ಎಸಿ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Monday, December 8, 2025, 16:38 [IST]
English summary
Top five 6 and 7 seater cars under rs 20 lakh carens clavis xl6 scorpio safari and innova
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+