Toyota: ಬೈಕ್‌ನಂತೆ 35.8 Km ಮೈಲೇಜ್.. ಹೊಸ ಟೊಯೊಟಾ ಕಾರು ಮತ್ತೊಮ್ಮೆ ಕಾಣಿಸಿಕೊಂಡೆ ಬಿಡ್ತು, ಬೆಲೆ ಎಷ್ಟು?

ಟೊಯೊಟಾ ಆಕ್ವಾ (Toyota Aqua) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಜಪಾನ್‌ನಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ. ಅಲ್ಲಿನ ಗ್ರಾಹಕರು ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿಯೂ ಈ ಕಾರನ್ನು ಬಿಡುಗಡೆಗೊಳಿಸಲು ಕಂಪನಿಯು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಅದರ ಭಾಗವಾಗಿ ಪರೀಕ್ಷೆಯನ್ನು ನಡೆಸುತ್ತಿದೆ. ಸದ್ಯ, ದೇಶೀಯ ರಸ್ತೆಯಲ್ಲಿ ಮತ್ತೊಮ್ಮೆ 'ಆಕ್ವಾ' ಪ್ರಾಯೋಜಿಕ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಆ ಕುರಿತ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ.

ಜಪಾನ್‌ ದೇಶದ ಗ್ರಾಹಕರ ಖರೀದಿಗೆ ಲಭ್ಯವಿರುವ 'ಟೊಯೊಟಾ ಆಕ್ವಾ' 1,980,000 ರಿಂದ 2,598,000 (ಜಪಾನ್ ಯೆನ್) ಬೆಲೆಯನ್ನು ಹೊಂದಿದೆ. ಬಿ, ಎಕ್ಸ್, ಜಿ ಹಾಗೂ ಝಡ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಭಾರತದಲ್ಲಿ ಇದೇ ಹ್ಯಾಚ್‌ಬ್ಯಾಕ್, ರೂ.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ. ಅತಿ ಶೀಘ್ರದಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ.

Toyota Aqua Hatchback Spotted Again Launch Soon Details

ನೂತನ 'ಟೊಯೊಟಾ ಆಕ್ವಾ' ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಹ್ಯಾಮರ್‌ಹೆಡ್' ಗ್ರಿಲ್, ಸ್ಲಿಮ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಉತ್ತಮವಾದ ವೀಲ್‌ಗಳನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್ ಮೈಕಾ, ಸಿಲ್ವರ್ ಮೆಟಾಲಿಕ್, ಬ್ಲ್ಯಾಕ್ ಮೈಕಾ ಹಾಗೂ ಪಾಪ್ ಆರೆಂಜ್ ಕ್ರಿಸ್ಟಲ್ ಶಿನ್‌ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹ್ಯಾಚ್‌ಬ್ಯಾಕ್ ಆಗಿದ್ದರೂ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,095 ಮಿ.ಮೀ ಉದ್ದ, 1,695 ಮಿ.ಮೀ ಅಗಲ ಹಾಗೂ 1,505 ಮಿ.ಮೀ ಎತ್ತರವಿದೆ. 140 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,230 ಕೆಜಿ ತೂಕವಿದೆ.

Toyota Aqua Hatchback Spotted Again Launch Soon Details

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 485 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ 'ಟೊಯೊಟಾ ಆಕ್ವಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ 3-ಸಿಲಿಂಡರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 89.8 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 120 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 35.8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 2ಡಬ್ಲ್ಯೂಡಿ (ಟೂ ವೀಲ್ ಡ್ರೈವ್) ಮತ್ತು 4ಡಬ್ಲ್ಯೂಡಿ (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

Toyota Aqua Hatchback Spotted Again Launch Soon Details

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.5 ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಫುಲ್ ಕಲರ್ ಟಿಎಫ್‌ಟಿ ಮಲ್ಟಿ ಇನ್ಫಾರ್ಮಶನ್ ಡಿಸ್​ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೆಡ್-ಅಪ್ ಡಿಸ್​ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪವರ್ ವಿಂಡೋಗಳು, ಸೆಂಟ್ರಲ್ ಲಾಕಿಂಗ್ ಹಾಗೂ ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ 'ಟೊಯೊಟಾ ಆಕ್ವಾ' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 8 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್ ಹಾಗೂ ಹಿಲ್-ಸ್ಟಾರ್ಟ್ ಅಸಿಸ್ಟ್ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Source: Carwale

More from DriveSpark

Article Published On: Monday, November 24, 2025, 11:33 [IST]
English summary
Toyota aqua hatchback spotted again launch soon details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+