Toyota: ಟೊಯೊಟಾದ ಕಾರುಗಳನ್ನು ಲೈಕ್ ಮಾಡಿದ ಗ್ರಾಹಕರು.. ಬಿಸಿ 'ಗೋಬಿ ಮಂಚೂರಿ'ಯಂತೆ ಸೇಲ್!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಕ್ರಾಸ್, ಅರ್ಬನ್ ಕ್ರೂಸರ್ ಹೈರೈಡರ್, ಟೈಸರ್, ಗ್ಲಾನ್ಜಾ, ಹಿಲಕ್ಸ್, ಫಾರ್ಚೂನರ್ ಮತ್ತು ರೂಮಿಯನ್‌ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತವೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಟೊಯೊಟಾ ಕಂಪನಿಯು ಈ ಏಪ್ರಿಲ್ ತಿಂಗಳ ಒಟ್ಟಾರೆ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿಯನ್ನು ಕಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಏಪ್ರಿಲ್-2025) ಟೊಯೊಟಾ ಕಂಪನಿಯು ಸರಿ ಸುಮಾರು 27,324 ಯುನಿಟ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಸಮಯದಲ್ಲಿ 20,494 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 33% ಬೆಳವಣಿಗೆಯಾಗಿದೆ.

Toyota Cars April 2025 Sales Details

ಟೊಯೊಟಾ ಮಾರಾಟಗೊಳಿಸುವ ಕೆಲವು ಪ್ರಮುಖ ಕಾರುಗಳ ಕುರಿತ ಸಂಕ್ಷಿಪ್ತ ವಿವರ..

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross): ಇದು ಜನಪ್ರಿಯ ಎಂಪಿವಿಯಾಗಿದೆ. ರೂ.20 ಲಕ್ಷದಿಂದ ರೂ.31 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುತ್ತದೆ. 2-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 16.13 ರಿಂದ 23.24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನಗಳನ್ನು ಒಳಗೊಂಡಿದೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

Toyota Cars April 2025 Sales Details

ಟೊಯೋಟಾ ಇನ್ನೋವಾ ಕ್ರಿಸ್ಟಾ (Toyota Innova Crysta): ಈ ಎಂಪಿವಿ ರೂ.20 ಲಕ್ಷದಿಂದ ರೂ.27 ಲಕ್ಷವರೆಗೆ ಎಕ್ಸ್-ಶೋರೂಂ ದರವನ್ನು ಹೊಂದಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor): ಇದೊಂದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಬಜೆಟ್ ಬೆಲೆಯಲ್ಲಿಯೇ ಸಿಗುತ್ತದೆ. ರೂ.8 ಲಕ್ಷದಿಂದ ರೂ.13 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Toyota Cars April 2025 Sales Details

ಟೊಯೊಟಾ ರೂಮಿಯನ್ (Toyota Rumion): ಈ ಎಂಪಿವಿ ರೂ.10.50 ಲಕ್ಷದಿಂದ ರೂ.14 ಲಕ್ಷವರೆಗೆ ಎಕ್ಸ್-ಶೋರೂಂ ದರವನ್ನು ಹೊಂದಿದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 20 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 7-ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಗ್ಲಾನ್ಜಾ (Toyota Glanza): ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದೆ. ರೂ.7 ಲಕ್ಷದಿಂದ ರೂ.10 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 22 ರಿಂದ 30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, May 2, 2025, 8:30 [IST]
English summary
Toyota cars april 2025 sales details
Read more on ಟೊಯೊಟಾ india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+