Toyota: ಹೊಸ ಟೊಯೊಟಾ ಕಾರುಗಳಿಗೆ ಫುಲ್ ಡಿಮ್ಯಾಂಡ್.. ಜನ ಮುಗಿಬಿದ್ದ ಖರೀದಿ, ಅದ್ದೂರಿ ಮಾರಾಟ!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯವಾಗಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ತಾ ಮುಂದು - ನಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ ಕಂಪನಿಯ ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 42,892 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 30,845 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯಲ್ಲಿ ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 39% ಪ್ರಗತಿಯಾಗಿದೆ.

ಇದೇ ಸೆಪ್ಟೆಂಬರ್‌ನಲ್ಲಿ 31,091 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅದಕ್ಕೆ ಹೋಲಿಕೆ ಮಾಡಿದರೆ, ತಿಂಗಳಿಂದ ತಿಂಗಳ (M-o-M) ಮಾರಾಟವು ಶೇಕಡ 38% ಬೆಳವಣಿಗೆಯಾಗಿದೆ. ಅಕ್ಟೋಬರ್‌ನಲ್ಲಿ ಟೊಯೊಟಾ ಕಾರುಗಳು ಈ ಪರಿಪ್ರಮಾಣದಲ್ಲಿ ಮಾರಾಟಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಸೆ.22 ರಿಂದಲೇ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, ಕಂಪನಿ ಕಾರುಗಳ ಬೆಲೆ ಭಾರೀ ಇಳಿಕೆಯಾಗಿದೆ. ಜೊತೆಗೆ ದೀಪಾವಳಿ ಹಬ್ಬವಿದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Toyota Cars October 2025 Sales Report

ಟೊಯೊಟಾ ಮಾರಾಟಗೊಳಿಸುವ ಪ್ರಮುಖ ಕಾರುಗಳ ಕುರಿತ ಸಂಕ್ಷಿಪ್ತ ವಿವರಗಳು:

ಟೊಯೊಟಾ ಇನ್ನೋವಾ ಹೈಕ್ರಾಸ್: ಇದು ಜನಪ್ರಿಯ ಎಂಪಿವಿಯಾಗಿದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುತ್ತದೆ. 2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಮತ್ತು 2-ಲೀಟರ್, 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 16.13 ರಿಂದ 23.24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7/8 ಆಸನಗಳನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ: ಈ ಎಂಪಿವಿಯು ರೂ.18.66 ಲಕ್ಷದಿಂದ ರೂ.25.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 8 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.

Toyota Cars October 2025 Sales Report

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್: ಇದೊಂದು ಎಸ್‌ಯುವಿಯಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 27.97 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್: ಈ ಎಸ್‌ಯುವಿಯು ರೂ.7.89 ಲಕ್ಷದಿಂದ ರೂ.13.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ.

Toyota Cars October 2025 Sales Report

ಟೊಯೊಟಾ ರೂಮಿಯನ್: ಇದು ಪ್ರಮುಖ ಎಂಪಿವಿಯಾಗಿದೆ. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.51 ರಿಂದ 26.1 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು.

ಟೊಯೊಟಾ ಗ್ಲಾನ್ಜಾ: ಈ ಹ್ಯಾಚ್‌ಬ್ಯಾಕ್ ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 22 ರಿಂದ 30 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ.

ಟೊಯೊಟಾ ಫಾರ್ಚೂನರ್: ಇದೊಂದು ಫುಲ್-ಸೈಜ್ ಎಸ್‌ಯುವಿಯಾಗಿದೆ. ರೂ.33.65 ಲಕ್ಷದಿಂದ ರೂ.48.85 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 10 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಒಳಗೊಂಡಿದೆ.

More from DriveSpark

Article Published On: Saturday, November 1, 2025, 19:21 [IST]
English summary
Toyota cars october 2025 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+