Toyota: ಫುಲ್ ಡಿಮ್ಯಾಂಡ್.. ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ ಕಾರುಗಳಿಗೆ ಕ್ಯೂ ನಿಂತ ಗ್ರಾಹಕರು!
ಭಾರತದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕರ್ನಾಟಕದ ಬಿಡದಿಯಲ್ಲಿ ಬೃಹತ್ ತಯಾರಕ ಘಟಕವನ್ನು ಹೊಂದಿದ್ದು, ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಕಂಪನಿಯು ಈ ಫೆಬ್ರವರಿ ತಿಂಗಳ ಒಟ್ಟಾರೆ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಫೆಬ್ರವರಿ - 2025) ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಬರೋಬ್ಬರಿ 28,414 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 25,220 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಬೆಳವಣಿಗೆಯಾಗಿದೆ.

ಅದರಲ್ಲೂ ಟೊಯೊಟಾ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ 26,414 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದ್ದರೆ, ವಿದೇಶಕ್ಕೆ 2,000 ಯುನಿಟ್‌ಗಳನ್ನು ರಫ್ತು ಮಾಡಿದೆ. ಟೊಯೊಟಾ ಈ ಪರಿಪ್ರಮಾಣದಲ್ಲಿ ಅಧಿವೃದ್ದಿ ಕಾಣಲು ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಕ್ರಾಸ್, ಅರ್ಬನ್ ಕ್ರೂಸರ್ ಹೈರೈಡರ್, ಟೈಸರ್, ಗ್ಲಾನ್ಜಾ, ಹಿಲಕ್ಸ್, ಫಾರ್ಚೂನರ್ ಹಾಗೂ ರೂಮಿಯನ್ ಕಾರುಗಳು ಪ್ರಮಖವಾದ ಕಾರಣವಾಗಿವೆ.
ಟೊಯೊಟಾ ಮಾರಾಟಗೊಳಿಸುವ ಕಾರುಗಳ ಸಂಕ್ಷಿಪ್ತ ವಿವರ: ಮೊದಲಿಗೆ ಗ್ಲಾನ್ಜಾ (Glanza) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.6.90 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.7.74 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು.
ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಬಗ್ಗೆ ತಿಳಿಸುವುದಾದರೆ, ಇದು ರೂ.10.54 ಲಕ್ಷದಿಂದ ರೂ.13.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಜೊತೆಗೆ 20.11 ರಿಂದ 26.11 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಇನ್ನೋವಾ (Toyota Innova) ಎಂಪಿವಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ಇನ್ನೋವಾ ಕ್ರಿಸ್ಟಾ ಮತ್ತು ಇನ್ನೋವಾ ಹೈಕ್ರಾಸ್ ಎಂಬ ಎರಡು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನೋವಾ ಕ್ರಿಸ್ಟಾ ರೂ.19.99 ಲಕ್ಷದಿಂದ ರೂ.26.82 ಲಕ್ಷ ಹಾಗೂ ಇನ್ನೋವಾ ಹೈಕ್ರಾಸ್ ರೂ.19.94 ಲಕ್ಷದಿಂದ ರೂ.31.34 ಲಕ್ಷ ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








