7-ಸೀಟರ್.. ಬಲಭೀಮ 'Toyota Suv'ಗೆ ಮುಗಿಬಿದ್ದ ಗ್ರಾಹಕರು.. ರೆಕಾರ್ಡ್ ಸಂಖ್ಯೆಯಲ್ಲಿ ಸೇಲ್ಸ್!

ಟೊಯೊಟಾ ಫಾರ್ಚುನರ್ (Toyota Fortuner) ಪ್ರಮುಖ ಫುಲ್-ಸೈಜ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ದೊಡ್ಡ ಗಾತ್ರದ ಕಾರಾಗಿದ್ದು, ಹೆಚ್ಚು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಟೊಯೊಟಾದ ಎಲ್ಲ ಕಾರುಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದೆ. ಅದರಲ್ಲೂ 'ಫಾರ್ಚುನರ್' ಎಸ್‌ಯುವಿ ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್ - 2025) ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಸರಿ ಸುಮಾರು 2,904 ಯುನಿಟ್ 'ಫಾರ್ಚುನರ್' ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 2,325 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 25% ಬೆಳವಣಿಗೆಯಾಗಿದೆ.

Toyota Fortuner Suv April 2025 Sales Details

ಇದೇ ವರ್ಷದ ಮೊದಲ 3 ತಿಂಗಳು ಸಹ 'ಟೊಯೊಟಾ ಫಾರ್ಚುನರ್' ಎಸ್‌ಯುವಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಮಾರ್ಚ್‌ನಲ್ಲಿ 3,392 ಯುನಿಟ್, ಫೆಬ್ರವರಿಯಲ್ಲಿ 2,876 ಯುನಿಟ್ ಹಾಗೂ ಜನವರಿಯಲ್ಲಿ 3,149 ಯುನಿಟ್‌ಗಳನ್ನು ಮಾರಲಾಗಿದೆ. ಇದನ್ನು ಸರಾಸರಿಯಾಗಿ ಲೆಕ್ಕ ಹಾಕಿದಾಗ, ಪ್ರತಿ ತಿಂಗಳು 2,500 ಯುನಿಟ್‌ಗೂ ಅಧಿಕ ಫಾರ್ಚುನರ್ ಎಸ್‌ಯುವಿಗಳನ್ನು ಮಾರಾಟಗೊಳಿಸಲಾಗಿದೆ.

'ಟೊಯೊಟಾ ಫಾರ್ಚುನರ್' ಕಾರಿನ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಇದೊಂದು ಫುಲ್-ಸೈಜ್ ಎಸ್‌ಯುವಿಯಾಯಾಗಿದ್ದು, ಸಾಕಷ್ಟು ಅತ್ಯಾಧುನಿಕವಾಗಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಗ್ರಾಹಕರು ಸಹ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಜೊತೆಗೆ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರಿಗೆ ಯಾವುದೇ ನೇರವಾದ ಎದುರಾಳಿಯಿಲ್ಲ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Toyota Fortuner Suv April 2025 Sales Details

ಟೊಯೊಟಾ ಫಾರ್ಚುನರ್ ವಿಶೇಷತೆಗಳೇನು..

ಇದೊಂದು ಎಸ್‌ಯುವಿಯಾಗಿದೆ. ಸ್ವಲ್ಪ ಮಟ್ಟಿಗೆ ದುಬಾರಿಯನ್ನು ಹೊಂದಿದೆ. ರೂ.35.37 ಲಕ್ಷದಿಂದ ರೂ.51.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಇದರಲ್ಲಿ 7 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 296 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು 2.7-ಲೀ. ಪೆಟ್ರೋಲ್ ಮತ್ತು 2.8-ಲೀ. ಟರ್ಬೊ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 10 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ನೂತನ ಎಸ್‌ಯುವಿ ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಮತ್ತು ಫ್ಯಾಂಟಮ್ ಬ್ರೌನ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಾಗಲಿದೆ.

Toyota Fortuner Suv April 2025 Sales Details

ನೂತನ ಟೊಯೊಟಾ ಫಾರ್ಚುನರ್ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಕಿಕ್-ಟು-ಓಪನ್ ಪವರ್ಡ್ ಟೈಲ್‌ಗೇಟ್ ಮತ್ತು ಡುಯಲ್-ಜೋನ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, May 20, 2025, 10:50 [IST]
English summary
Toyota fortuner suv april 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+