Toyota: 7-ಸೀಟರ್.. ಈ ಗಜ ಗಾತ್ರದ ಟೊಯೊಟಾ SUV ಕುರಿತ ಪ್ರಮುಖಾಂಶಗಳು!

ಟೊಯೊಟಾ ಫಾರ್ಚುನರ್ (Toyota Fortuner) ಜನಪ್ರಿಯ ಫುಲ್-ಸೈಜ್ ಎಸ್‌ಯುವಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸೆಲೆಬ್ರಿಟಿಗಳು ಹಾಗೂ ಶ್ರೀಮಂತ ವರ್ಗದ ಗ್ರಾಹಕರ ನೆಚ್ಚಿನ ಕಾರಾಗಿಯೂ ಹೊರಹೊಮ್ಮಿದೆ. ನೀವು ಹೊಚ್ಚ ಹೊಸ ಎಸ್‌ಯುವಿಯೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಫಾರ್ಚುನರ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ, ಈ ಕಾರಿನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಇದು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಒಳಗೊಂಡಿದೆ. ಕನಿಷ್ಠ ರೂ.33.65 ಲಕ್ಷ ಹಾಗೂ ಗರಿಷ್ಠ ರೂ.48.85 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್, ಲೆಜೆಂಡರ್, ಜಿಆರ್ ಎಸ್, ಲೀಡರ್ ಎಡಿಷನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Toyota Fortuner Suv Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಈ ಎಸ್‌ಯುವಿಯು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 20 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅವಾಂತ್ ಗಾರ್ಡ್ ಬ್ರೋನ್, ಆಟಿಟ್ಯೂಡ್ ಬ್ಲ್ಯಾಕ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್, ಫ್ಯಾಂಟಮ್ ಬ್ರೌನ್, ಪ್ಲಾಟಿನಂ ವೈಟ್ ಪರ್ಲ್ ಹಾಗೂ ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ನೂತನ 'ಫಾರ್ಚುನರ್' ಎಸ್‌ಯುವಿ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,795 ಮಿ.ಮೀ ಉದ್ದ, 1,855 ಮಿ.ಮೀ ಅಗಲ ಮತ್ತು 1,835 ಮಿ.ಮೀ ಎತ್ತರವಿದೆ. 225 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,745 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 2,180 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆದಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 296 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):

ಈ ಕಾರು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 2.8-ಲೀಟರ್ ಮೈಲ್ಡ್ ಹೈಬ್ರಿಡ್ ಡೀಸೆಲ್ ಎಂಜಿನ್, 204 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಮತ್ತೊಂದು 2.8-ಲೀಟರ್ ಡೀಸೆಲ್ ಎಂಜಿನ್, 204 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇನ್ನೊಂದು 2.7-ಲೀಟರ್ ಪೆಟ್ರೋಲ್ ಎಂಜಿನ್, 166 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 245 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 10.3 ರಿಂದ 14 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಹೊಸ 'ಫಾರ್ಚುನರ್' ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 8 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕನೆಕ್ಟ್ಡ್ ಕಾರ್ ಟೆಕ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಕಿಕ್-ಟು-ಓಪನ್ ಪವರ್ಡ್ ಟೈಲ್‌ಗೇಟ್, ಡುಯಲ್ ಜೋನ್ ಎಸಿ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 190 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 8.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಅಸಿಸ್ಟ್ ಕಂಟ್ರೋಲ್ ಹಾಗೂ ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್‌ಗಳನ್ನು ಪಡೆದಿದೆ.

More from DriveSpark

Article Published On: Friday, November 14, 2025, 17:16 [IST]
English summary
Toyota fortuner suv price design mileage features and all top things
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+