5-ಸೀಟರ್, 30 ಕಿ.ಮೀ ಮೈಲೇಜ್.. ಅಗ್ಗದ ಟೊಯೊಟಾ ಕಾರಿಗಾಗಿ ಮುಗಿಬಿದ್ದ ಗ್ರಾಹಕರು, ಫುಲ್ ಡಿಮ್ಯಾಂಡ್!

ಟೊಯೊಟಾ ಗ್ಲಾನ್ಜಾ (Toyota Glanza) ಜನಮೆಚ್ಚಿದ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಆಗಸ್ಟ್ ತಿಂಗಳಲ್ಲೂ 'ಗ್ಲಾನ್ಜಾ' ದೂಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 5102 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 4624 ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಹೋಲಿಸಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 10.34% ಬೆಳವಣಿಗೆಯಾಗಿದೆ.

ಟೊಯೊಟಾ ಗ್ಲಾನ್ಜಾ ವಿಶೇಷತೆಗಳೇನು:

ಪ್ರಸ್ತುತ ಈ ಹ್ಯಾಚ್‌ಬ್ಯಾಕ್‌ ಕನಿಷ್ಠ ರೂ. 6.99 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕೇಂದ್ರ ಸರ್ಕಾರವು ಕಾರುಗಳ ಖರೀದಿ ಮೇಲೆ ವಿಧಿಸುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು 28% ರಿಂದ 18%ಗೆ ಕಡಿತಗೊಳಿಸಿದೆ. ಪರಿಷ್ಕೃತ ದರಗಳು ಸೆಪ್ಟೆಂಬರ್ 22 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಆ ಬಳಿಕ 'ಗ್ಲಾನ್ಜಾ' ಕಾರಿನ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ.

Toyota Glanza August 2025 Sales Details

ಇದು ಇ, ಎಸ್, ಜಿ ಮತ್ತು ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. . ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16 ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ನೂತನ ಗ್ಲಾನ್ಜಾ ಕಾರು ಸ್ಪೋರ್ಟಿನ್ ರೆಡ್, ಇನ್‌ಸ್ಟಾ ಬ್ಲೂ, ಗೇಮಿಂಗ್ ಗ್ರೇ ಹಾಗೂ ಕೆಫೆ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 3990 ಎಂಎಂ ಉದ್ದ, 1745 ಎಂಎಂ ಅಗಲ ಹಾಗೂ 1500 ಎಂಎಂ ಎತ್ತರವು ಇದೆ. ಜೊತೆಗಿದು 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 1035 ಕೆಜಿ ವರೆಗೆ ತೂಕವಿದೆ.

Toyota Glanza August 2025 Sales Details

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 318 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Toyota Glanza August 2025 Sales Details

ಹೊಸ ಟೊಯೊಟಾ ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಕನೆಕ್ಟ್ಡ್ ಕಾರ್ ಟೆಕ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್‍ಸಿ (ವೆಹಿಕಲ್ - ಸ್ಟೆಬಿಲಿಟಿ ಕಂಟ್ರೋಲ್), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಮಿಡಲ್ 3-ಪಾಯಿಂಟ್ ಸೀಟ್‌ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Article Published On: Saturday, September 13, 2025, 8:30 [IST]
English summary
Toyota glanza august 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+