Toyota: ಬೈಕ್‌ನಂತೆ 30 Km ಮೈಲೇಜ್.. ಈ ಅಗ್ಗದ ಟೊಯೊಟಾ ಕಾರಿಗೆ ಫುಲ್ ಡಿಮ್ಯಾಂಡ್, ಮುಗಿಬಿದ್ದ ಗ್ರಾಹಕರು!

ಟೊಯೊಟಾ ಗ್ಲಾನ್ಜಾ (Toyota Glanza) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ನವೆಂಬರ್ ತಿಂಗಳಲ್ಲೂ 'ಗ್ಲಾನ್ಜಾ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 5,032 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 3,806 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 32% ಹೆಚ್ಚಳಗೊಂಡಿದೆ.

ಇದೇ ನವೆಂಬರ್‌ನಲ್ಲಿ 'ಗ್ಲಾನ್ಜಾ' ಮಾರಾಟವು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ 'ಜಿಎಸ್‌ಟಿ' ಪರಿಷ್ಕರಣಿಗೊಂಡಿದೆ. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಇದು ಹ್ಯಾಚ್‌ಬ್ಯಾಕ್‌ ಆಗಿದ್ದರೂ ನೋಡಲು ಎಸ್‌ಯುವಿಯಂತೆ ಭಾಸವಾಗುತ್ತದೆ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Toyota Glanza Car November 2025 Sales Report

ಈ ವರ್ಷದ ಜೂನ್‌ನಿಂದ ಅಕ್ಟೋಬರ್ ತಿಂಗಳವರೆಗೂ 'ಟೊಯೊಟಾ ಗ್ಲಾನ್ಜಾ' ಕಾರು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗಿದೆ. ಬರೋಬ್ಬರಿ 22,520 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅಂದರೆ ಪ್ರತಿ ತಿಂಗಳು ಸರಾಸರಿ 4,504 ಯುನಿಟ್‌ಗಳು ಮಾರಾಟವಾಗಿವೆ. ನೂತನ 'ಗ್ಲಾನ್ಜಾ' ರೂಪಾಂತರಗಳಿಗೆ ಅನುಗುಣವಾಗಿ ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಹೊಂದಿದೆ.

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಪಡೆದಿದೆ. ಉತ್ತಮವಾದ ಎಲ್ಇಡಿ ಪ್ರೊಜೆಕ್ಟರ್‌ಗಳನ್ನು ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಜೊತೆಗೆ ದೊಡ್ಡ ಗಾತ್ರದ 16-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.

Toyota Glanza Car November 2025 Sales Report

ಹೊಸ 'ಟೊಯೊಟಾ ಗ್ಲಾನ್ಜಾ' ಹೆಚ್ಚು ವಿಶಾಲವಾಗಿದೆ. 3,990 ಎಂಎಂ ಉದ್ದ, 1,745 ಎಂಎಂ ಅಗಲ ಹಾಗೂ 1,500 ಎಂಎಂ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಕೆಫೆ ವೈಟ್, ಇನ್‌ಸ್ಟಾ ಬ್ಲೂ ಮತ್ತು ಗೇಮಿಂಗ್ ಗ್ರೇ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Toyota Glanza Car November 2025 Sales Report

ಇದು 5-ಆಸನ ಆಯ್ಕೆ ವ್ಯವಸ್ಥೆವನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಹೈಟ್-ಅಡ್ಜಸ್ಟಬಲ್ ಡ್ರೈವರ್ ಸೀಟ್, ಕನೆಕ್ಟ್ಡ್-ಕಾರ್ ಟೆಕ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ 'ಗ್ಲಾನ್ಜಾ' ಪ್ರಯಾಣಿಕರಿಗೆ ಗರಿಷ್ಠವಾದ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇದಕ್ಕೆ ಹಲವು ಪ್ರತಿಸ್ಪರ್ಧಿಗಳಾಗಿವೆ. ಮಾರುತಿ ಸುಜುಕಿ ಬಲೆನೊ (Maruti Suzuki Baleno), ರೆನಾಲ್ಟ್ ಕ್ವಿಡ್ (Renault Kwid), ಟಾಟಾ ಟಿಯಾಗೊ (Tata Tiago) ಹಾಗೂ ಹ್ಯುಂಡೈ ಐ20 (Hyundai i20) ಕಾರುಗಳು ನೇರವಾದ ಎದುರಾಳಿಯಾಗಿವೆ.

More from DriveSpark

Article Published On: Sunday, December 21, 2025, 16:04 [IST]
English summary
Toyota glanza car november 2025 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+