5-ಸೀಟರ್, 30 ಕಿ.ಮೀ ಮೈಲೇಜ್.. ಸದ್ದಿಲ್ಲದೇ ಈ ಅಗ್ಗದ ಟೊಯೊಟಾ ಕಾರಿನ ಬೆಲೆ ಏರಿಕೆ, ಎಷ್ಟಾಗಿದೆ?

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motors), ನಂಬಿಕಾರ್ಹ ವಾಹನ ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ 'ಗ್ಲಾನ್ಜಾ' ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟೇ ಖರೀದಿ ಮಾಡುತ್ತಿದ್ದಾರೆ. ಸದ್ಯ ಇದೇ ಹ್ಯಾಚ್‌ಬ್ಯಾಕ್‌ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳು ಏನಿದೆ ಎಂಬುದನ್ನು ತಿಳಿಯೋಣ.

ನೂತನ ಟೊಯೊಟಾ ಗ್ಲಾನ್ಜಾ (Toyota Glanza) ಹ್ಯಾಚ್‌ಬ್ಯಾಕ್‌ ದರವನ್ನು ರೂ.12,000 ವರೆಗೆ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆಯು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ವ್ಯತ್ಯಯವಾಗಲಿದೆ. ವಿಶೇಷವಾಗಿ 'ಎಸ್' ರೂಪಾಂತರದ ದರ ರೂ.12,000, 'ಇ' ರೂಪಾಂತರದ ಬೆಲೆ ರೂ.9,000 ಹಾಗೂ 'ಜಿ' ರೂಪಾಂತರದ ದರ ರೂ.8,000 ವರೆಗೆ ಅಧಿಕಗೊಂಡಿದೆ. ನೂತನ ಕಾರು ಕನಿಷ್ಠ ರೂ.6.99 ಲಕ್ಷ ಹಾಗೂ ಗರಿಷ್ಠ ರೂ.10 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

Toyota Glanza Hatchback Price Hike Details

ಮಾರುಕಟ್ಟೆ ತಜ್ಞರ ಪ್ರಕಾರ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ದೇಶೀಯವಾಗಿಯೂ ಇದೇ 'ಗ್ಲಾನ್ಜಾ' ಹ್ಯಾಚ್‌ಬ್ಯಾಕ್‌ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗಿದೆ. ಕಳೆದ ತಿಂಗಳು (ಜುಲೈ - 2025) ಒಟ್ಟು 5,019 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಟೊಯೊಟಾ ಗ್ಲಾನ್ಜಾ ವಿಶೇಷತೆಗಳೇನು:

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿರುವ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪೋರ್ಟಿಂಗ್ ರೆಡ್, ಎನ್‌ಟಿಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಹಾಗೂ ಕೆಫೆ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Toyota Glanza Hatchback Price Hike Details

ಇದು 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 3990 ಎಂಎಂ ಉದ್ದ, 1745 ಎಂಎಂ ಅಗಲ ಮತ್ತು 1500 ಎಂಎಂ ಎತ್ತರ ಕೂಡ ಇದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ ಗ್ಲಾನ್ಜಾ ಎರಡು ಶಕ್ತಿಯುತ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Toyota Glanza Hatchback Price Hike Details

ಮತ್ತೊಂದು 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ 77.5 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾಡಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಹೊಂದಿದೆ. 22 ರಿಂದ 30.61 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಟೊಯೊಟಾ ಐ ಕನೆಕ್ಟ್ ಕನೆಕ್ಟೆಡ್ ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರಿಗೆ ಮಾರುತಿ ಸುಜುಕಿ ಬಲೆನೊ, ಹ್ಯುಂಡೈ ಐ20 ಹಾಗೂ ಟಾಟಾ ಆಲ್ಟ್ರೋಜ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Sunday, August 17, 2025, 11:00 [IST]
English summary
Toyota Kirloskar Motor has revised the prices of its popular Glanza hatchback models, effective February 2024. Prices have increased by up to INR 12,000, impacting various trims while the model continues to perform well in the market.
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+