30 Km ಮೈಲೇಜ್.. 5-ಸೀಟರ್, 6.90 ಲಕ್ಷ.. ಈ ಜನಪ್ರಿಯ ಕಾರನ್ನು ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಕಾರಣವೇನು?

ಟೊಯೊಟಾ ಗ್ಲಾನ್ಜಾ (Toyota Glanza) ಪ್ರಮುಖ ಹ್ಯಾಚ್‌ಬ್ಯಾಕ್‌ ಆಗಿದೆ. ಈ ಕಾರು ಹೆಚ್ಚು ಅತ್ಯಾಧುನಿಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಆದರೂ ಗ್ಲಾನ್ಜಾ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು 'ಮೇ'ನಲ್ಲೂ ಮುಂದುವರಿದಿದ್ದು, 4753 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 4517 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 5.22% ಇಳಿಕೆಯಾಯಾಗಿದೆ.

ಈ ವರ್ಷಾರಂಭದ ಮೊದಲ 4 ತಿಂಗಳಲ್ಲೂ ಟೊಯೊಟಾ ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ ಮಾರಾಟ ಸಂಖ್ಯೆಯು ಹೇಳಿಕೊಳ್ಳುವ ರೀತಿಯಲ್ಲಿರಲಿಲ್ಲ. ಇಲ್ಲಿಯೂ ಹಾವು - ಏಣಿ ಆಟ ಮುಂದುವರಿದಿದೆ. ಏಪ್ರಿಲ್‌ನಲ್ಲಿ 4,132 ಯುನಿಟ್, ಮಾರ್ಚ್‌ನಲ್ಲಿ 3,501 ಯುನಿಟ್, ಫೆಬ್ರವರಿಯಲ್ಲಿ 4,596 ಯುನಿಟ್ ಮತ್ತು ಜನವರಿಯಲ್ಲಿ 3,455 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Toyota Glanza May 2025 Sales Details

ಟೊಯೊಟಾ ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ ಮಾರಾಟ ಪ್ರಮಾಣವು ಇಳಿಮುಖವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರಿನ ದರಕ್ಕೆ ಜಬರ್ದಸ್ತ್ ಎಸ್‌ಯುವಿಗಳು ಖರೀದಿಗೆ ಲಭ್ಯವಿದ್ದು, ಗ್ರಾಹಕರು ಅವುಗಳತ್ತ ತಮ್ಮ ಚಿತ್ತ ನೆಟ್ಟಿದ್ದಾರೆ. ಜೊತೆಗೆ ವೈಶಿಷ್ಟ್ಯಗಳಲ್ಲೂ ಕೂಡ ಒಂದಷ್ಟು ಕೊರೆತೆಯಿದೆ. ಹೀಗಾಗಿ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಟೊಯೊಟಾ ಗ್ಲಾನ್ಜಾ ಕಾರಿನ ವಿಶೇಷತೆಗಳೇನು:

ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿದೆ. ಮಾರುತಿ ಸುಜುಕಿ ಬಲೆನೊದ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ರೂ.6.90 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇ, ಎಸ್ ಹಾಗೂ ಜಿ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಹೊರಭಾಗವು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಹಾಗೂ ಸ್ಪೋರ್ಟಿನ್ ರೆಡ್ ಬಣ್ಣಗಳೊಂದಿಗೂ ಸಿಗುತ್ತದೆ.

Toyota Glanza May 2025 Sales Details

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಜೊತೆಗೆ 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಈ ಕಾರು 3990 ಎಂಎಂ ಉದ್ದ, 1745 ಎಂಎಂ ಅಗಲ ಹಾಗೂ 1500 ಎಂಎಂ ಎತ್ತರವು ಇದೆ. 2520 ಎಂಎಂ ವೀಲ್ ಬೇಸ್‌ನ್ನು ಪಡೆದಿದೆ.

Toyota Glanza May 2025 Sales Details

ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿರುವ 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಹೆಡ್ಸ್ - ಅಪ್ ಡಿಸ್ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್‌ಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಡಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಇದೇ 'ಗ್ಲಾನ್ಜಾ'ಗೆ ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಅಮೇಜ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Saturday, June 21, 2025, 9:24 [IST]
English summary
Toyota glanza may 2025 sales details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+