30 Km ಮೈಲೇಜ್.. 6 ಲಕ್ಷ, ಈ ಟೊಯೊಟಾ ಕಾರನ್ನು ಖರೀದಿಸಬೇಕೇ.. ಹೊಸ ಆನ್-ರೋಡ್ ದರವೆಷ್ಟು, EMI ಏನು?

ಟೊಯೊಟಾ ಗ್ಲಾನ್ಜಾ (Toyota Glanza) ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕನಿಷ್ಠ ರೂ.6.39 ಲಕ್ಷ ಹಾಗೂ ಗರಿಷ್ಠ ರೂ.9.15 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, 'ಗ್ಲಾನ್ಜಾ' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ನೂತನ 'ಟೊಯೊಟಾ ಗ್ಲಾನ್ಜಾ' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 'ಇ' (ಪೆಟ್ರೋಲ್) ರೂಪಾಂತರ, ರೂ.7.64 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.4.64 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.9,500 ವರೆಗೆ ಇಎಂಐ ಕಟ್ಟಬೇಕು.

Toyota Glanza New On Road Price Mileage And Emi Details

ಇನ್ನೊಂದು 'ಎಸ್' (ಪೆಟ್ರೋಲ್) ರೂಪಾಂತರ, ರೂ.8.63 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.5.63 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.11,500 ವರೆಗೆ ಇಎಂಐ ಪಾವತಿ ಮಾಡಬೇಕು.

ಮತ್ತೊಂದು 'ಜಿ' (ಪೆಟ್ರೋಲ್) ರೂಪಾಂತರ, ರೂ.9.70 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮಾಡಿ ತೆಗೆದುಕೊಂಡರೆ, ರೂ.6.70 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.13,500 ವರೆಗೆ ಇಎಂಐ ಕಟ್ಟಬೇಕು.

Toyota Glanza New On Road Price Mileage And Emi Details

ಇದೇ ಕಾರಿನ 'ಎಸ್' ಸಿಎನ್‌ಜಿ ರೂಪಾಂತರ, ರೂ.9.60 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.6,60 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.13,400 ವರೆಗೆ ಇಎಂಐ ಪಾವತಿಸಬೇಕು.

'ಟೊಯೊಟಾ ಗ್ಲಾನ್ಜಾ' ವಿಶೇಷತೆಗಳೇನು:

ಈ ಕಾರು ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪೋರ್ಟಿನ್ ರೆಡ್, ಇನ್‌ಸ್ಟಾ ಬ್ಲೂ, ಗೇಮಿಂಗ್ ಗ್ರೇ & ಕೆಫೆ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Toyota Glanza New On Road Price Mileage And Emi Details

ನೂತನ 'ಗ್ಲಾನ್ಜಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವುದೇ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 22 ರಿಂದ 30 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ನಿಮ್ಮ ಗಮನಕ್ಕೆ.. ಇಲ್ಲಿ 'ಟೊಯೊಟಾ ಗ್ಲಾನ್ಜಾ' ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ & ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Thursday, October 23, 2025, 17:13 [IST]
English summary
Toyota glanza new on road price mileage and emi details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+