30 Km ಮೈಲೇಜ್.. 5-ಸೀಟರ್, 6.90 ಲಕ್ಷದ ಟೊಯೊಟಾ ಗ್ಲಾನ್ಜಾ ಕಾರಿನ ಆನ್-ರೋಡ್ ಬೆಲೆ ಎಷ್ಟು, EMI ಏನು?
ಟೊಯೊಟಾ ಗ್ಲಾನ್ಜಾ (Toyota Glanza) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು 'ಮಾರುತಿ ಸುಜುಕಿ ಬಲೆನೊ'ದ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಕನಿಷ್ಠ ರೂ.6.90 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೀವು ಹೊಚ್ಚ ಹೊಸ 'ಗ್ಲಾನ್ಜಾ' ಹ್ಯಾಚ್‌ಬ್ಯಾಕ್‌ನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ (On Road Price) ಹಾಗೂ ಇಎಂಐ (Emi) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ನೂತನ 'ಟೊಯೊಟಾ ಗ್ಲಾನ್ಜಾ' ಹ್ಯಾಚ್‌ಬ್ಯಾಕ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ 'ಇ' ಪೆಟ್ರೋಲ್ ರೂಪಾಂತರ, ರೂ.8.25 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಈ ಕಾರನ್ನು ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಪಾವತಿ ಮಾಡಿ ಮನೆಗೆ ತಂದರೆ, ರೂ.7.60 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.12,600 ವರೆಗೆ ಇಎಂಐ ಕಟ್ಟಬೇಕು.

ಈ ಕಾರಿನ 'ಎಸ್' ಪೆಟ್ರೋಲ್ ರೂಪಾಂತರ ಸರಿ ಸುಮಾರು ರೂ.9.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.7.95 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.16,000 ವರೆಗೆ ಇಎಂಐ ಪಾವತಿಸಬೇಕು.
ಇದೇ ಹ್ಯಾಚ್‌ಬ್ಯಾಕ್‌ನ 'ಜಿ' ಪೆಟ್ರೋಲ್ ರೂಪಾಂತರ, ರೂ.10.50 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.8.50 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಎಂಐ ಕಟ್ಟಬೇಕು.

ಹಾಗೆಯೇ ಗ್ಲಾನ್ಜಾದ 'ಎಸ್' ಸಿಎನ್‌ಜಿ ರೂಪಾಂತರ, ರೂ.10.35 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷವರೆಗೆ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.8.35 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.17,000 ವರೆಗೆ ಇಎಂಐ ಪಾವತಿಸಬೇಕು.
ಟೊಯೊಟಾ ಗ್ಲಾನ್ಜಾ ವಿಶೇಷತೆಗಳೇನು:
ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಇನ್‌ಸ್ಟಾ ಬ್ಲೂ, ಗೇಮಿಂಗ್ ಗ್ರೇ ಮತ್ತು ಕೆಫೆ ವೈಟ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ಸಿಗುತ್ತದೆ.
ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ ಗ್ಲಾನ್ಜಾ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಹ್ಯಾಚ್‌ಬ್ಯಾಕ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು) ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








