30 ಕಿ.ಮೀ ಮೈಲೇಜ್‌ನ ಅದ್ಭುತ ಟೊಯೊಟಾ ಕಾರಿಗೆ ಗ್ರಾಹಕರಿಂದ ನಿರೀಕ್ಷಿಸದ ಟ್ವಿಸ್ಟ್... ಏನ್ ಗೊತ್ತಾ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ತನ್ನ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಮಾರುತಿ ಸುಜುಕಿ ಬಲೆನೊ ಆಧಾರಿತ ಈ ಟೊಯೊಟಾ ಗ್ಲಾಂಝಾ (Toyota Glanza) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿ ಇದಾಗಿದೆ. ಜನಪ್ರಿಯ ಟೊಯೊಟಾ ಗ್ಲಾಂಝಾದ ಕಳೆದ ತಿಂಗಳ ಮಾರಾಟ ವರದಿ ಬಹಿರಂಗವಾಗಿದೆ. 2024ರ ಡಿಸೆಂಬರ್ ತಿಂಗಳಿನಲ್ಲಿ ಟೊಯೊಟಾ ಗ್ಲಾಂಝಾ ಮಾದರಿಯ 3,487 ಯುನಿಟ್‌ಗಳು ಮಾರಾಟವಾಗಿವೆ. ಇನ್ನು 2023ರ ಡಿಸೆಂಬರ್ ತಿಂಗಳಿನಲ್ಲಿ ಗ್ಲಾಂಝಾದ 4,088 ಯುನಿಟ್‌ಗಳು ಮಾರಾಟವಾಗಿತ್ತು.
ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.15 ರಷ್ಟು ಕುಸಿತವನ್ನು ಕಂಡಿದೆ. ಈ ಟೊಯೊಟಾ ಗ್ಲಾಂಝಾ ಕಾರು ಮಾರುತಿ ಸುಜುಕಿ ಬಲೆನೊ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಟೊಯೊಟಾ ಗ್ಲಾಂಝಾ ಕಾರಿನ ವಿನ್ಯಾಸದ ಬಗ್ಗೆ ಹೆಳುವುದಾದರೆ, ಇದರ ಮುಂಭಾಗದ ಹೊಸ ವಿನ್ಯಾಸ ಶೈಲಿಯೊಂದಿಗೆ ಬಂದಿದೆ. ಟೊಯೊಟಾದ ಜಾಗತಿಕ ಕಾರುಗಳಿಗೆ ಅನುಗುಣವಾಗಿದ್ದು, ಕ್ಯಾಮ್ರಿ ತರಹದ ಮುಂಭಾಗದ ಗ್ರಿಲ್ ಮತ್ತು ಬಂಪರ್, ಹೊಸ ಕ್ರೋಮ್ ಮತ್ತು ಎಲ್-ಆಕಾರದ ಎಲ್ಇಡಿ ಡಿಆರ್ಎಲ್ ಗಳನ್ನು ಒಳಗೊಂಡಿದೆ.

ಗ್ಲಾಂಝಾ ಪ್ರೀಮಿಯಂ ಕಾರಿನ ಹಿಂಭಾಗವು ಸ್ವಲ್ಪ ಪರಿಷ್ಕೃತ ಬಂಪರ್ ಮತ್ತು ಟೈಲ್-ಲೈಟ್‌ಗಾಗಿ ಹೊಸ ಇನ್‌ಸರ್ಟ್‌ಗಳೊಂದಿಗೆ ಬರುತ್ತದೆ. ಇದು ಹೊಸದಾಗಿ ಟೊಯೊಟಾ ಗ್ಲಾಂಝಾ ವಿನ್ಯಾಸಗೊಳಿಸಲಾದ 16-ಇಂಚಿನ ವ್ಹೀಲ್ ಗಳನ್ನು ಹೊಂದಿದೆ. ಗ್ಲಾಂಝಾ ಕಾರು ಇ, ಎಸ್, ಜಿ, ವಿ ರೂಪಾಂತರ, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಸೇರಿದಂತೆ 5 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಇನ್ನು ಗ್ಲಾಂಝಾ ಹ್ಯಾಚ್‌ಬ್ಯಾಕ್ ಕಾರಿನ ಕ್ಯಾಬಿನ್ ಹೊಸ ಬಲೆನೊ ಮಾದರಿಗೆ ಹೋಲುವಂತಿದೆ. ಈ ಗ್ಲಾಂಝಾ ಕಾರಿನಲ್ಲಿ ಸುರಕ್ಷೆತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಇದರಲ್ಲಿ ಆರು ಏರ್‌ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎತ್ತರ ಹೊಂದಾಣಿಕೆಯ ಡ್ರೈವರ್ ಸೀಟ್, ಇಬಿಡಿಯೊಂದಿಗೆ ಎಬಿಎಸ್ ಇತ್ಯಾದಿಗಳಂತಹ ಉನ್ನತ-ಮಟ್ಟದ ಸುರಕ್ಷತಾ ವೈಶಿಷ್ಟ್ಯಗಳನ್ನು ನೀಡಿದೆ.

ಟೊಯೊಟಾ ಗ್ಲಾಂಝಾ ಕಾರಿನಲ್ಲಿ 1.2-ಲೀಟರ್ ಡ್ಯುಯಲ್-ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ ಸಿಎನ್‌ಜಿ ಇಂಧನದೊಂದಿಗೆ, 76 ಬಿಹೆಚ್‍ಪಿ ಪವರ್ ಮತ್ತು 98.5 ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಟೊಯೊಟಾ ಗ್ಲಾಂಝಾ ಇ-ಸಿಎನ್‌ಜಿ 5-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇನ್ನು ಈ ಟೊಯೊಟಾ ಗ್ಲಾಂಝಾ ಕಾರಿನ ವೈಶಿಷ್ಟ್ಯಗಳ ವಿಷಯದಲ್ಲಿ, ಈ ಕಾರಿನಲ್ಲಿ ಮಲ್ಟಿ-ಫಂಕ್ಷನಲ್ ಲೆದರ್ ಸುತ್ತಿದ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್ ಮತ್ತು ನವೀಕರಿಸಿದ ಇನ್ಸ್ಟ್ರುಮೆಂಟ್ ಕನ್ಸೋಲ್ ಅನ್ನು ಹೊಂದಿದೆ.

ಇದರೊಂದಿಗೆ ಈ ಗ್ಲಾಂಝಾ ಕಾರಿನಲ್ಲಿ ಸೆಂಟರ್ ಕನ್ಸೋಲ್‌ನಲ್ಲಿ ಹೊಸ ಏರ್-ಕಾನ್ ವೆಂಟ್‌ಗಳು ಮತ್ತು ಹಿಂಭಾಗ ಆಟೋಮ್ಯಾಟಿಕ್ ಎಸಿಯನ್ನು ಒಳಗೊಂಡಿವೆ. ಇದರೊಂದಿಗೆ Apple CarPlay ಮತ್ತು Android Auto, ನ್ಯಾವಿಗೇಶನ್ ಮತ್ತು ವಾಯ್ಸ್ ಕಾಮೆಂಡ್ ಗಳೊಂದಿಗೆ ದೊಡ್ಡ 9-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








