30 ಕಿ.ಮೀ ಮೈಲೇಜ್.. 5-ಸೀಟರ್, ಅಗ್ಗದ ಟೊಯೊಟಾ ಕಾರಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!
ಟೊಯೊಟಾ ಗ್ಲಾನ್ಜಾ (Toyota Glanza) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಮಾರುತಿ ಸುಜುಕಿ ಬಲೆನೊದ ರೀ-ಬ್ಯಾಡ್ಜ್ ಮಾಡೆಲ್ ಆಗಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದ್ದು, ಹಲವು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ'ಗ್ಲಾನ್ಜಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,299 ಯುನಿಟ್‌ಗಳನ್ನು ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 3,246 ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 2% ಪ್ರಗತಿಯಾಗಿದೆ.
ಟೊಯೊಟಾ ಗ್ಲಾನ್ಜಾ ವಿಶೇಷತೆಗಳೇನು:
ಈ ಕಾರು ಅಗ್ಗದ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಇ, ಎಸ್, ಜಿ ಮತ್ತು ವಿ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಇನ್‌ಸ್ಟಾ ಬ್ಲೂ, ಗೇಮಿಂಗ್ ಗ್ರೇ ಹಾಗೂ ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ 'ಗ್ಲಾನ್ಜಾ' ವಿಶಾಲ ಗಾತ್ರದಲ್ಲಿದೆ. 3,990 ಮಿ.ಮೀ ಉದ್ದ, 1,745 ಮಿ.ಮೀ ಅಗಲ ಮತ್ತು 1,500 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1035 ಕೆಜಿ ತೂಕವಿದೆ.

ಈ ಕಾರು 2 ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗಿದು 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮತ್ತೊಂದು 1.2-ಲೀಟರ್ ಸಾಮರ್ಥ್ಯದ ಸಿಎನ್‌ಜಿ ಎಂಜಿನ್, 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಹೊಸ 'ಗ್ಲಾನ್ಜಾ' ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಕನೆಕ್ಟ್ಡ್ ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ ಹಾಗೂ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








