Toyota: ಇದೇ ರಸ್ತೆ ಮೇಲಿನ 'ಬಲಭೀಮ'.. ಹೊಸ ಟೊಯೊಟಾ ಹಿಲಕ್ಸ್ ಬಿಡುಗಡೆ, ಬೆಲೆ ಎಷ್ಟು.. ವಿಶೇಷತೆಗಳೇನು?
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ಕಳೆದ ಜನವರಿಯಲ್ಲಿ ಅದ್ದೂರಿಯಾಗಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕಂಪನಿಯು 'ಹಿಲಕ್ಸ್' ಪಿಕ್ಅಪ್ ಟ್ರಕ್‌ನ 'ಬ್ಲ್ಯಾಕ್ ಎಡಿಷನ್' ಮಾಡೆಲ್‌ನ್ನು ಅನಾವರಣಗೊಳಿಸಿತ್ತು. ಸದ್ಯ, ಇದೇ ಪಿಕ್ಅಪ್ ಟ್ರಕ್ ಅದ್ದೂರಿಯಾಗಿ ಬಿಡುಗಡೆಗೊಂಡಿದ್ದು, ರೂ.37.90 ಲಕ್ಷ (ಎಕ್ಸ್-ಶೋರೂಂ - ಪ್ಯಾನ್ ಇಂಡಿಯಾ) ಬೆಲೆಯನ್ನು ಹೊಂದಿದೆ. ಬನ್ನಿ.. ಈ ನೂತನ ಕಾರಿನ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಹೊಸ ಟೊಯೊಟಾ ಹಿಲಕ್ಸ್ ಬ್ಲ್ಯಾಕ್ ಎಡಿಷನ್ (Toyota Hilux Black Edition) ಪಿಕ್ಅಪ್ ಟ್ರಕ್ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸಾಮಾನ್ಯ 'ಹಿಲಕ್ಸ್'ಗೆ ಹೋಲಿಸಿದರೆ, ಕಪ್ಪು (ಬ್ಲ್ಯಾಕ್) ಬಣ್ಣದ ಥೀಮ್‌ನ್ನು ಒಳಗೊಂಡಿದೆ. ಇದರ ಗ್ರಿಲ್, ಅಲಾಯ್ ವೀಲ್‌ಗಳು, ರೇರ್‌ವ್ಯೂ ಮಿರರ್‌ಗಳು ಮತ್ತು ಡೋರ್ ಹ್ಯಾಂಡಲ್‌ಗಳು ಕೂಡ ಕಪ್ಪು ಬಣ್ಣವನ್ನೇ ಒಳಗೊಂಡಿವೆ.

ಇದರೊಟ್ಟಿಗೆ ಹಳೆಯ ಮಾಡೆಲ್‌ನಂತೆಯೇ ಪ್ರೊಜೆಕ್ಟರ್-ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಟೈಲ್‌ಗೇಟ್‌ನಲ್ಲಿ 'ಟೊಯೊಟಾ' ಹೆಸರನ್ನು ದೊಡ್ಡ ಗಾತ್ರದ ಅಕ್ಷರದಲ್ಲಿ ಬರೆಯಲಾಗಿದೆ. ನೂತನ ಟೊಯೊಟಾ ಹಿಲಕ್ಸ್ ಬ್ಲ್ಯಾಕ್ ಎಡಿಷನ್ ಒಳಭಾಗದ ವಿನ್ಯಾಸವು ಹೆಚ್ಚು ಅತ್ಯುತ್ತಮವಾಗಿದ್ದು, ನೋಡುಗರನ್ನು ಸೆಳೆಯುವುದರಲ್ಲಿ ಎರಡು ಮಾಡಿಲ್ಲ.
ಈ ಪಿಕ್ಅಪ್ ಟ್ರಕ್‌ನ ಪವರ್‌ಟ್ರೇನ್ ಆಯ್ಕೆಯಲ್ಲಿ ಸಹ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಇದು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 204 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 12 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ಹೊಚ್ಚ ಹೊಸ ಟೊಯೊಟಾ ಹಿಲಕ್ಸ್ ಬ್ಲ್ಯಾಕ್ ಎಡಿಷನ್ ಪಿಕ್ಅಪ್ ಟ್ರಕ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 435 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ನೂತನ ಪಿಕ್ಅಪ್ ಟ್ರಕ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಅನಲಾಗ್ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಡುಯಲ್ ಝೋನ್ ಆಟೋ ಕ್ಲೇಮೇಟ್ ಕಂಟ್ರೋಲ್, ಡುಯಲ್ ಜೋನ್ ಎಸಿ, 6-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಕೂಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಟೊಯೊಟಾ ಹಿಲಕ್ಸ್ ಬ್ಲ್ಯಾಕ್ ಎಡಿಷನ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಹೆಚ್ಎಸಿ (ಹಿಲ್ ಅಸಿಸ್ಟ್ ಕಂಟ್ರೋಲ್), ಬ್ರೇಕ್ ಅಸಿಸ್ಟ್, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್ಸ್, ರೇರ್ ಪಾರ್ಕಿಂಗ್ ಕ್ಯಾಮೆರಾ ಹಾಗೂ ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








