Toyota: 8-ಸೀಟರ್.. ಐರಾವತದಂತಹ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಬೆಲೆ ಏರಿಕೆ, ಎಷ್ಟು?
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ವಿಶ್ವಾಸಾರ್ಹ ಎಂಪಿವಿಯಾಗಿದ್ದು, ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರು ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಇದು ವಿಶಾಲ ಗಾತ್ರದ ಕಾರಾಗಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಅದಕ್ಕೆ ತಕ್ಕಂತೆ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಇದೀಗ ಟೈಸರ್, ರೂಮಿಯನ್ ಹಾಗೂ ಇನ್ನೋವಾ ಹೈಕ್ರಾಸ್ ಬಳಿಕ, ಈ ಕಾರಿನ ದರವನ್ನು ಕಂಪನಿಯು ಏರಿಕೆ ಮಾಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿಯ ಆಯ್ದ ರೂಪಾಂತರಗಳ (ವೇರಿಯೆಂಟ್) ಬೆಲೆಯನ್ನು ರೂ.26,000 ವರೆಗೆ ಹೆಚ್ಚಳ ಮಾಡಲಾಗಿದೆ. ಇದು 7/ 8 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಖರೀದಿಗೆ ಲಭ್ಯವಿರುವ ವಿಎಕ್ಸ್ & ಝಡ್ಎಕ್ಸ್ ರೂಪಾಂತರಗಳಿಗೆ ಅನ್ವಯಿಸುತ್ತದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಈ ಮೂಲಕ ಹೊಸ ಇನ್ನೋವಾ ಕ್ರಿಸ್ಟಾ ಎಂಪಿವಿ ರೂ.19.99 ಲಕ್ಷದಿಂದ ರೂ.27 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲ್ಯಾಂಪ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಹಾಗೂ ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ ಕ್ರಿಸ್ಟಾ ಕಾರು 7/ 8 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 300 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಜೊತೆಗೆ 4755 ಎಂಎಂ ಉದ್ದ, 1845 ಎಂಎಂ ಅಗಲ ಮತ್ತು 1795 ಎತ್ತರವು ಇದೆ. 185 ಗ್ರೌಂಡ್ ಕ್ಲಿಯರೆನ್ಸ್ & 2850 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 150 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) & 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 65 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.
ನೂತನ ಕ್ರಿಸ್ಟಾ ಎಂಪಿವಿ 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಹಾಗೂ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯ ಬೆಲೆಯೂ ಏರಿಕೆ, ಎಷ್ಟಾಗಿದೆ:
ಈ ಕಾರಿನ ಆಯ್ದ ರೂಪಾಂತರಗಳ ದರವನ್ನು ರೂ.11,000 ರಿಂದ ರೂ.15,000 ವರೆಗೆ ಏರಿಕೆ ಮಾಡಲಾಗಿದೆ. ಕನಿಷ್ಠ ರೂ.19.94 ಲಕ್ಷ ಮತ್ತು ಗರಿಷ್ಠ ರೂ.31.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಅಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಹೊಂದಿದೆ. 23 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 10.1-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








