8 ಆಸನಗಳು.. ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ವಿಶ್ವಾಸಾರ್ಹ ಎಂಪಿವಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ 'ಇನ್ನೋವಾ ಕ್ರಿಸ್ಟಾ' ಎಂಪಿವಿಯನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಕಾರಿನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ನೂತನ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 8-ಆಸನಗಳ 'ಜಿಎಕ್ಸ್' ರೂಪಾಂತರ, ರೂ.24.60 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಈ ಕಾರನ್ನು ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.19.60 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ 39,000 ವರೆಗೆ ಇಎಂಐ ಕಟ್ಟಬೇಕು.

ಇದೇ ಇನ್ನೋವಾ ಕ್ರಿಸ್ಟಾ ಎಂಪಿವಿಯ 7-ಆಸನಗಳ 'ಜಿಎಕ್ಸ್' ರೂಪಾಂತರ, ರೂ.25.35 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡಿರೆ, ರೂ.20.35 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ 41,000 ವರೆಗೆ ಇಎಂಐ ಪಾವತಿ ಮಾಡಬೇಕು.
ಈ ಕಾರಿನ 7-ಆಸನಗಳ 'ಜಿಎಕ್ಸ್ ಪ್ಲಸ್' ರೂಪಾಂತರ, 27.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.22.30 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ 45,000 ವರೆಗೆ ಇಎಂಐ ಕಟ್ಟಬೇಕು.

ಹೊಸ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿಯ 7-ಆಸನಗಳ 'ವಿಎಕ್ಸ್' ರೂಪಾಂತರ, ರೂ. 31.98 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, 26.98 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ 54,000 ವರೆಗೆ ಇಎಂಐ ಪಾವತಿ ಮಾಡಬೇಕು.
ಟೊಯೊಟಾ ಇನ್ನೋವಾ ಕ್ರಿಸ್ಟಾ ವಿಶೇಷತೆಗಳೇನು:
ಇದೊಂದು ದೊಡ್ಡ ಗಾತ್ರದ ಎಂಪಿವಿಯಾಗಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್ ಹಾಗೂ ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು 4735 ಎಂಎಂ ಉದ್ದ, 1830 ಎಂಎಂ ಅಗಲ ಹಾಗೂ 1795 ಎಂಎಂ ಎತ್ತರವು ಇದೆ.
ನೂತನ ಇನ್ನೋವಾ ಕ್ರಿಸ್ಟಾ ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಕೇವಲ 2.4-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಸರಿ ಸುಮಾರು 8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 55 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ಇದರಲ್ಲಿ 7/ 8 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ - ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ - ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಫ್ರಂಟ್ - ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ನಾವಿಲ್ಲಿ ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








