Toyota: 8-ಸೀಟರ್.. ಈ ಆನೆ ಗಾತ್ರದ ಟೊಯೊಟಾ MPV ಕುರಿತ ಪ್ರಮುಖಾಂಶಗಳು!
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಪ್ರಮುಖ ಎಂಪಿವಿಯಾಗಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ. ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಶ್ರೀಸಾಮಾನ್ಯರು ಮಾತ್ರವಲ್ಲದೆ, ರಾಜಕಾರಣಿ ಹಾಗೂ ಸೆಲೆಬ್ರಿಟಿಗಳು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಇನ್ನೋವಾ ಕ್ರಿಸ್ಟಾ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇಲ್ಲಿ ಈ ಎಂಪಿವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಈ ಎಂಪಿವಿಯು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.18.66 ಲಕ್ಷ ಹಾಗೂ ಗರಿಷ್ಠ ರೂ.25.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿಎಕ್ಸ್, ಜಿಎಕ್ಸ್ ಪ್ಲಸ್, ವಿಎಕ್ಸ್ ಹಾಗೂ ಜಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 17 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಮತ್ತು ಅವಂತ್-ಗಾರ್ಡ್ ಬ್ರೊನ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ನೂತನ 'ಇನ್ನೋವಾ ಕ್ರಿಸ್ಟಾ' ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,735 ಮಿ.ಮೀ ಉದ್ದ, 1,830 ಮಿ.ಮೀ ಅಗಲ ಹಾಗೂ 1,795 ಮಿ.ಮೀ ಎತ್ತರವಿದೆ. ಜೊತೆಗಿದು 178 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 1920 ಕೆಜಿ ತೂಕವಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 150 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ
ಹೊಸ 'ಇನ್ನೋವಾ ಕ್ರಿಸ್ಟಾ' ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 9 ರಿಂದ 10.5 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 55 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ವೈಶಿಷ್ಟ್ಯಗಳು (Features):
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ವೇ ಪವರ್ಡ್ ಡ್ರೈವರ್ ಸೀಟ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಎ (ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








