Toyota: ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಬಿಡುಗಡೆ.. ಬೆಲೆ ಎಷ್ಟಿದೆ, ವಿಶೇಷತೆಗಳೇನು?
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಜನಪ್ರಿಯ ಎಂಪಿವಿಯಾಗಿ ಗುರುತಿಸಿಕೊಂಡಿದೆ. ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ದೊಡ್ಡ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, 'ಇನ್ನೋವಾ ಹೈಕ್ರಾಸ್'ನ್ನು ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಿಸಲು ಕಂಪನಿಯು ಮುಂದಾಗಿದ್ದು, ಶುಕ್ರವಾರ ಇದರ 'ಎಕ್ಸ್‌ಕ್ಲೂಸಿವ್ ಎಡಿಷನ್'ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಸಾಮಾನ್ಯ 'ಇನ್ನೋವಾ ಹೈಕ್ರಾಸ್'ಗೆ ಹೋಲಿಕೆ ಮಾಡಿದರೆ, ನೂತನ ಎಂಪಿವಿ ವಿನ್ಯಾಸದಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಹೊಚ್ಚ ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ (Toyota Innova Hycross Exclusive Edition) ಎಂಪಿವಿ ದುಬಾರಿ ಬೆಲೆಯಲ್ಲಿಯೇ ಮಾರಾಟಕ್ಕೆ ಬಂದಿದೆ. ರೂ.32.58 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಇದು, ಪ್ರಸ್ತುತ ಖರೀದಿಗೆ ದೊರೆಯುವ ಇನ್ನೋವಾ ಹೈಕ್ರಾಸ್‌ನ 'ಜಡ್ಎಕ್ಸ್(ಒ)' ಹೆಸರಿನ ಗರಿಷ್ಠ ಶ್ರೇಣಿ ರೂಪಾಂತರವನ್ನು (ಟಾಪ್ ಎಂಡ್ ವೇರಿಯೆಂಟ್) ಆಧರಿಸಿದೆ. ಈ ಕಾರನ್ನು ಜುಲೈ (2025) ತಿಂಗಳವರೆಗೆ ಮಾತ್ರ ಮಾರಾಟಗೊಳಿಸಲಾಗುತ್ತದೆ.

ನೂತನ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಎಂಪಿವಿಯು ಸೂಪರ್ ವೈಟ್ & ಪರ್ಲ್ ವೈಟ್ ಎಂಬ ಎರಡು ಆಕರ್ಷಕವಾದ ಬಣ್ಣಗಳೊಂದಿಗೂ ಸಿಗುತ್ತದೆ. ಇದರೊಟ್ಟಿಗೆ ಈ ಕಾರು ಬ್ಯ್ಲಾಕ್ (ಕಪ್ಪು) ಬಣ್ಣದ ರೂಫ್, ಗ್ರಿಲ್, ಮಿರರ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಹೊಸ ಎಂಪಿವಿಯ ಒಳಭಾಗದ ವಿನ್ಯಾಸವು ಸಾಕಷ್ಟು ಉತ್ತಮವಾಗಿದೆ.
ಈ ಎಂಪಿವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದು 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 186 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 23.24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಎಂಪಿವಿ, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಜೋನ್ ಆಟೋ ಎಸಿ, ಪನೋರಮಿಕ್ ಸನ್‌ರೂಫ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ರೇರ್-ಎಸಿ ವೆಂಟ್‌ಗಳನ್ನು ಒಳಗೊಂಡಿದೆ.
ನೂತನ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಕಾರು, ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಎಂಪಿವಿ 7/ 8 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 300 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ನೂತನ ಕಾರಿಗೆ ಕಿಯಾ ಕ್ಯಾರೆನ್ಸ್ ಹಾಗೂ ಮಾರುತಿ ಸುಜುಕಿ ಎಕ್ಸ್ಎಲ್6 ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications