ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಕುರಿತ ಪ್ರಮುಖಾಂಶಗಳಿವು.. ಯಾರು ಹೇಳಲ್ಲ!

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಪ್ರಖ್ಯಾತ ಎಂಪಿವಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ಈ ಕಾರಿನ ಎಕ್ಸ್‌ಕ್ಲೂಸಿವ್ ಎಡಿಷನ್ (Exclusive Edition) ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಹೊರಭಾಗದ ವಿನ್ಯಾಸದಲ್ಲಿ ಒಂದಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಕೊಂಚ ದುಬಾರಿ ಬೆಲೆಯನ್ನೇ ಹೊಂದಿದೆ. ಜೊತೆಗೆ ಜುಲೈವರೆಗೆ ಮಾತ್ರ ಖರೀದಿಗೆ ಲಭ್ಯವಿದೆ. ಬನ್ನಿ, ಈ ಎಂಪಿವಿಯ ಬೆಲೆ ಹಾಗೂ ವಿಶೇಷತೆಗಳನ್ನು ಒಳಗೊಂಡ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ (Price): ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ (Toyota Innova Hycross Exclusive Edition) ಎಂಪಿವಿ, ರೂ.32.58 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಇದು ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಸಾಮಾನ್ಯ ಇನ್ನೋವಾ ಹೈಕ್ರಾಸ್‌ನ 'ಜಡ್ಎಕ್ಸ್(ಒ)' ಹೆಸರಿನ ರೂಪಾಂತರವನ್ನು (ವೇರಿಯೆಂಟ್) ಆಧರಿಸಿದೆ.

Toyota Innova Hycross Exclusive Edition Mpv Top Things Details

ವಿನ್ಯಾಸ & ಬಣ್ಣಗಳು (Design & Colors): ನೂತನ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಈಗಿರುವ ಇನ್ನೋವಾ ಹೈಕ್ರಾಸ್‌ಗೆ ಹೋಲಿಕೆಯಾಗುತ್ತದೆ. ಸೂಪರ್ ವೈಟ್ ಮತ್ತು ಪರ್ಲ್ ವೈಟ್ ಹೆಸರಿನ ಎರಡು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹಾಗೆಯೇ ಬ್ಯ್ಲಾಕ್ (ಕಪ್ಪು) ಬಣ್ಣದ ರೂಫ್, ಗ್ರಿಲ್, ಮಿರರ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಒಳಭಾಗದಲ್ಲಿ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ.

ಕಾರ್ಯಕ್ಷಮತೆ (Performance): ಈ ಕಾರು ಹೆಚ್ಚು ಬಲಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ ಆಯ್ಕೆಯನ್ನು ಹೊಂದಿದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 23.24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು (Features): ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ವೈಶಿಷ್ಟ್ಯಗಳಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು ಸಾಮಾನ್ಯ ಇನ್ನೋವಾ ಹೈಕ್ರಾಸ್‌ಗೆ ಹೋಲಿಕೆಯಾಗುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಸನ್‌ರೂಫ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಡುಯಲ್-ಜೋನ್ ಆಟೋ ಎಸಿಯನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಹೊಂದಿದೆ.

ಒಟ್ಟಾರೆಯಾಗಿ ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಎಕ್ಸ್‌ಕ್ಲೂಸಿವ್ ಎಡಿಷನ್ 7/8 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಈ ಕಾರಿಗೆ ಕಿಯಾ ಕ್ಯಾರೆನ್ಸ್ & ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿಗಳು ನೇರ ಎದುರಾಳಿಯಾಗಿವೆ. ಜೊತೆಗೆ ನೂತನ ಎಕ್ಸ್‌ಕ್ಲೂಸಿವ್ ಎಡಿಷನ್ ಹೆಚ್ಚು ಅತ್ಯಾಧುನಿಕವಾಗಿದ್ದು, ಮುಂಬರುವ ದಿನಗಳಲ್ಲಿ ಇದೇ ಕಾರಿಗೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, May 5, 2025, 8:23 [IST]
English summary
Toyota innova hycross exclusive edition mpv top things details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+