Toyota: 23 ಕಿ.ಮೀ ಮೈಲೇಜ್.. 8-ಸೀಟರ್, ಆನೆ ಗಾತ್ರದ ಟೊಯೊಟಾ ಇನ್ನೋವಾ ಹೈಕ್ರಾಸ್‌ಗೆ ಮುಗಿಬಿದ್ದ ಗ್ರಾಹಕರು!
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಜಗಮೆಚ್ಚಿದ ಎಂಪಿವಿಯಾಗಿದೆ. ಇದು ಅತ್ಯಾಧುನಿಕವಾದ ವಿನ್ಯಾಸ ಮತ್ತು ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಈ ಆಗಸ್ಟ್ ತಿಂಗಳಲ್ಲೂ 'ಇನ್ನೋವಾ ಹೈಕ್ರಾಸ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 5,827 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 5,236 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 11.29% ಪ್ರಗತಿಯಾಗಿದೆ.
ಟೊಯೊಟಾ ಇನ್ನೋವಾ ಹೈಕ್ರಾಸ್ ವಿಶೇಷತೆಗಳೇನು:
ಈ ಎಂಪಿವಿಯು ಜಿಎಸ್‌ಟಿ ಪರಿಷ್ಕರಣೆ ಬಳಿಕ, ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ಕನಿಷ್ಠ ರೂ.18.16 ಲಕ್ಷ ಹಾಗೂ ಗರಿಷ್ಠ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿಎಕ್ಸ್, ಜಿಎಕ್ಸ್ (ಒ), ವಿಎಕ್ಸ್ ಮತ್ತು ಜಡ್ಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳೊಂದಿಗೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 18 ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ಇನ್ನೋವಾ ಹೈಕ್ರಾಸ್' ಕಾರು ವಿಶಾಲ ಗಾತ್ರದಲ್ಲಿದೆ. 4755 ಎಂಎಂ ಉದ್ದ, 1845 ಎಂಎಂ ಅಗಲ ಹಾಗೂ 1795 ಎತ್ತರವಿದೆ. ಜೊತೆಗಿದು 185 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1730 ಕೆಜಿ ತೂಕವಿದೆ.
ಈ ಕಾರು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 300 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 2.0 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0 ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಒಳಗೊಂಡಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 16 ರಿಂದ 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 52 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ 'ಇನ್ನೋವಾ ಹೈಕ್ರಾಸ್' ಎಂಪಿವಿಯು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪವರ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋ ಎಸಿ ಮತ್ತು ರೇರ್ ಎಸಿ ವೆಂಟ್‌ಗಳನ್ನು ಹೊಂದಿದೆ.
ಭಾರತ್ ಎನ್‌ಸಿಎಪಿಯು 'ಟೊಯೊಟಾ ಇನ್ನೋವಾ ಹೈಕ್ರಾಸ್' ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.47 ಅಂಕಗಳನ್ನು ಗಳಿಸಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. ಇದರೊಂದಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಸಫಲವಾಗಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








