ಇದೇ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯ ತಾಕತ್ತು, ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌!

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಪ್ರಖ್ಯಾತ ಎಂಪಿವಿಯಾಗಿ ಹೊರಹೊಮ್ಮಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಇದೇ 'ಇನ್ನೋವಾ ಹೈಕ್ರಾಸ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.47 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Toyota Innova Hycross Mpv Get 5 Star safety rating in Bharat NCAP Crash Test Details

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್‌ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ ವಿಶೇಷತೆಗಳೇನು:

ಇದೊಂದು ದೊಡ್ಡ ಗಾತ್ರದ ಎಂಪಿವಿಯಾಗಿದ್ದು, ರೂ.19.94 ಲಕ್ಷದಿಂದ ರೂ.32.58 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿಎಕ್ಸ್, ವಿಎಕ್ಸ್, ಜಿಎಕ್ಸ್(ಒ), ವಿಎಕ್ಸ್(ಒ), ಝಡ್ಎಕ್ಸ್ ಹಾಗೂ ಝಡ್ಎಕ್ಸ್ (ಒ) ಒಳಗೊಂಡಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಅಟಿಟ್ಯೂಡ್ ಬ್ಲ್ಯಾಕ್ ಮೈಕಾ ಮತ್ತು ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

Toyota Innova Hycross Mpv Get 5 Star safety rating in Bharat NCAP Crash Test Details

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸಾಮಾನ್ಯ ಕಾರುಗಳಿಗೆ ಕಡಿಮೆಯಿಲ್ಲದ ರೀತಿಯಲ್ಲಿ 23 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಇನ್ನೋವಾ ಹೈಕ್ರಾಸ್ 7/ 8 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. 10.1-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋ ಎಸಿ, ಪನೋರಮಿಕ್ ಸನ್‌ರೂಫ್, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ರೇರ್-ಎಸಿ ವೆಂಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಎಂಪಿವಿಯು ಖರೀದಿಗೆ ಲಭ್ಯ:

ಇದು ರೂ.19.99 ಲಕ್ಷದಿಂದ ರೂ.26.55 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/8 ಆಸನಗಳನ್ನು ಹೊಂದಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್-ಎಸಿ ವೆಂಟ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಒಟ್ಟಾರೆಯಾಗಿ, ಟೊಯೊಟಾ ಇನ್ನೋವಾ ಹೈಕ್ರಾಸ್ ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ಅತ್ಯಂತ ಸುರಕ್ಷಿತ ಕಾರಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಸಂತಸವನ್ನು ತಂದಿದೆ. ಜೊತೆಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ ಪಡೆದ ಮೊದಲ ಎಂಪಿವಿಯಾಗಿಯೂ ಗುರುತಿಸಿಕೊಂಡಿದೆ. ಹೀಗಾಗಿ, ಮುಂಬರುವ ದಿನಗಳಲ್ಲಿ ಈ ಕಾರಿನ ಮಾರಾಟ ಸಂಖ್ಯೆ ಮತ್ತಷ್ಟು ಅಧಿಕಗೊಳ್ಳುವ ನಿರೀಕ್ಷೆಯಿದೆ.

Article Published On: Monday, June 30, 2025, 13:51 [IST]
English summary
Toyota innova hycross mpv get 5 star safety rating in bharat ncap crash test details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+