Toyota: ಸದ್ದಿಲ್ಲದೇ ಜನಾಕರ್ಷಣೆಯ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಬೆಲೆ ಏರಿಕೆ.. ಎಷ್ಟಾಗಿದೆ?

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶ್ವಾಸಾರ್ಹ ಎಂಪಿವಿಯಾಗಿದೆ. ಇದು ದೊಡ್ಡ ಗಾತ್ರದ ಕಾರಾಗಿದೆ. ನೋಡಲು ಕೂಡ ತುಂಬಾ ಚೆನ್ನಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಇದೇ 'ಇನ್ನೋವಾ ಹೈಕ್ರಾಸ್' ಎಂಪಿವಿ ಬೆಲೆ ಏರಿಕೆಯಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಬನ್ನಿ, ಯಾವ ರೂಪಾಂತರದ (ವೇರಿಯೆಂಟ್) ದರ ಎಷ್ಟು ಹೆಚ್ಚಳವಾಗಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ಜಿಎಕ್ಸ್ 7-ಸೀಟರ್ ಹಾಗೂ ಜಿಎಕ್ಸ್ 8-ಸೀಟರ್ ರೂಪಾಂತರಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಜಿಎಕ್ಸ್ (ಒ) 7-ಸೀಟರ್ ಮತ್ತು ಜಿಎಕ್ಸ್ (ಒ) 8-ಸೀಟರ್ ರೂಪಾಂತರಗಳ ದರ ರೂ.11,000 ದಷ್ಟು ಅಧಿಕಗೊಂಡಿದೆ.

Toyota Innova Hycross Mpv Gets Price Increase Details

ಅದೇ ರೀತಿಯಲ್ಲಿ 7/ 8 ಸೀಟರ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ವಿಎಕ್ಸ್ ಹೈಬ್ರಿಡ್, ವಿಎಕ್ಸ್ (ಒ) ಹೈಬ್ರಿಡ್, ಜಡ್ಎಕ್ಸ್ ಹೈಬ್ರಿಡ್ ಮತ್ತು ಜಡ್ಎಕ್ಸ್ (ಒ) ಹೈಬ್ರಿಡ್ ರೂಪಾಂತರಗಳ ಬೆಲೆ ತಲಾ ರೂ.15,000 ಹೆಚ್ಚಳವಾಗಿದೆ. ಇದರೊಂದಿಗೆ ಇನ್ನೋವಾ ಹೈಕ್ರಾಸ್ ಎಂಪಿವಿಯು ರೂ.19.94 ಲಕ್ಷದಿಂದ ರೂ.31.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಪ್ರತಿಯೊಬ್ಬರನ್ನು ಆಕರ್ಷಿಸುತ್ತದೆ. ಅಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್ ಹಾಗೂ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 4755 ಎಂಎಂ ಉದ್ದ, 1845 ಎಂಎಂ ಅಗಲ ಮತ್ತು 1795 ಎತ್ತರವಿದೆ. ಜೊತೆಗೆ 185 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2850 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Toyota Innova Hycross Mpv Gets Price Increase Details

ನೂತನ ಕಾರು 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಪಡೆದಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಸರಿ ಸುಮಾರು 23 ಕಿ.ಮೀ ವರೆಗೂ ಮೈಲೇಜ್ ನೀಡಬಲ್ಲದು. 52 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಹೊಸ ಇನ್ನೋವಾ ಹೈಕ್ರಾಸ್ ಎಂಪಿವಿಯ ಕ್ಯಾಬಿನ್ ವಿನ್ಯಾಸವು ಸಹ ಅಚ್ಚುಕಟ್ಟಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಪನೋರಮಿಕ್ ಸನ್‌ರೂಫ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್ ಜೋನ್ ಆಟೋ ಎಸಿ ಮತ್ತು ರೇರ್ ಎಸಿ ವೆಂಟ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Toyota Innova Hycross Mpv Gets Price Increase Details

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿ ನಡೆಸಿದ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್‌ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿಯೂ ಖರೀದಿಗೆ ಲಭ್ಯ: ವಿಶೇಷತೆಗಳೇನು?

ಇದು ರೂ.19.99 ಲಕ್ಷದಿಂದ ರೂ.27.08 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಆತ್ಯಾಧುನಿಕವಾದ ವಿನ್ಯಾಸವನು ಪಡೆದಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್ & ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 8 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 7/ 8 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Wednesday, July 16, 2025, 18:03 [IST]
English summary
Toyota innova hycross mpv gets price increase details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+