23 ಕಿ.ಮೀ ಮೈಲೇಜ್.. 8-ಸೀಟರ್, ಈ ಜನಪ್ರಿಯ ಟೊಯೊಟಾ MPV ಕುರಿತ ಪ್ರಮುಖಾಂಶಗಳು!
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಪ್ರಮುಖ ಎಂಪಿವಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ. ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರು ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಇನ್ನೋವಾ ಹೈಕ್ರಾಸ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಂಪಿವಿಯ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants)
ಇದು ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.18.16 ಲಕ್ಷ ಹಾಗೂ ಗರಿಷ್ಠ ರೂ.30.83 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಜಿ, ಜಿಎಕ್ಸ್, ವಿಎಕ್ಸ್, ಜಡ್ಎಕ್ಸ್ (ಒ) ಹಾಗೂ ವಿಎಕ್ಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಮತ್ತು ಸೂಪರ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimensions):
ನೂತನ 'ಇನ್ನೋವಾ ಹೈಕ್ರಾಸ್' ಎಂಪಿವಿ ಹೆಚ್ಚು ವಿಶಾಲವಾಗಿದೆ. 4,755 ಮಿ.ಮೀ ಉದ್ದ, 1845 ಮಿ.ಮೀ ಅಗಲ ಮತ್ತು 1795 ಮಿ.ಮೀ ಎತ್ತರವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2850 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1,730 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 7/ 8 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಅಥವಾ ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಈ ಕಾರು ಶಕ್ತಿಶಾಲಿಯಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 173 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 204 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 16.13 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಮತ್ತೊಂದು 2-ಲೀಟರ್, 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 188.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 23.24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ವೈಶಿಷ್ಟ್ಯಗಳು (Features):
ಹೊಸ 'ಇನ್ನೋವಾ ಹೈಕ್ರಾಸ್' ಎಂಪಿವಿಯು 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4 ಪವರ್ ವಿಂಡೋಗಳು, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಆಟೋ ಎಸಿ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ರಿವರ್ಸ್ ಕ್ಯಾಮೆರಾ ಮತ್ತು ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








