8-ಸೀಟರ್.. ಜನಪ್ರಿಯ ಟೊಯೊಟಾ ಇನ್ನೋವಾ ಹೈಕ್ರಾಸ್ ಕೊಳ್ಳಬೇಕೇ.. ಹೊಸ ಆನ್-ರೋಡ್ ದರವೆಷ್ಟು, EMI ಏನು?
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶ್ವಾಸಾರ್ಹ ಎಂಪಿವಿಯಾಗಿದೆ. ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಅದರ ಸಂಪೂರ್ಣ ಪ್ರಯೋಜನವು 'ಇನ್ನೋವಾ ಹೈಕ್ರಾಸ್' ಕಾರಿಗೂ ಲಭ್ಯವಿದ್ದು, ರೂ.1,15 ಲಕ್ಷವರೆಗೆ ಬೆಲೆ ಇಳಿಕೆಯಾಗಿದೆ. ಕನಿಷ್ಠ ರೂ.18.16 ಲಕ್ಷ ಹಾಗೂ ಗರಿಷ್ಠ ರೂ.30.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೀವು ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, 'ಟೊಯೊಟಾ ಇನ್ನೋವಾ ಹೈಕ್ರಾಸ್' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಎಂಪಿವಿಯ ಆನ್-ರೋಡ್ ದರ (On-Road Price) ಹಾಗೂ ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ನೂತನ 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿ ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ 'ಜಿ' 7-ಸೀಟರ್ (ಪೆಟ್ರೋಲ್) ರೂಪಾಂತರ, ರೂ.22.40 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.17.40 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.35,000 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು 'ಜಿ' 8-ಸೀಟರ್ (ಪೆಟ್ರೋಲ್) ರೂಪಾಂತರ, ರೂ.22.46 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.17.46 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.35,400 ವರೆಗೆ ಇಎಂಐ ಪಾವತಿ ಮಾಡಬೇಕು.
ಮತ್ತೊಂದು 'ಜಿಎಕ್ಸ್' 7-ಸೀಟರ್ (ಪೆಟ್ರೋಲ್) ರೂಪಾಂತರ, ರೂ.23.26 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.18.26 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.37,000 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ 'ವಿಎಕ್ಸ್' 7-ಸೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ರೂಪಾಂತರ, ರೂ.32.09 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.27.09 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.54,000 ಇಎಂಐ ಪಾವತಿಸಬೇಕು.
ಟೊಯೊಟಾ ಇನ್ನೋವಾ ಹೈಕ್ರಾಸ್ ವಿಶೇಷತೆಗಳೇನು:
ಈ ಎಂಪಿವಿಯು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಮತ್ತು ಸೂಪರ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2850 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 2.0 ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0 ಲೀ. ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಒಳಗೊಂಡಿದೆ. 16 ರಿಂದ 23 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 10.69 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ನೂತನ 'ಇನ್ನೋವಾ ಹೈಕ್ರಾಸ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








